ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗಿಕರಣ ಕುರಿತು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆಯನ್ನು ಜಿಲ್ಲಾಡಳಿತದ ವತಿಯಿಂದ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ.
ಮನೆ ಮನೆಯ ಭೇಟಿ ಸಂದರ್ಭದಲ್ಲಿ ಮಾಹಿತಿಯನ್ನು ನೀಡದವರು ನೇರವಾಗಿ ಆನ್ಲೈನ್ ಮೂಲಕ
https://schedulecastesurvey.karnataka.gov.in/selfdeclaration ವೆಬ್ಸೈಟ್ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಲು ಮೇ 28 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ನೋಂದಣಿಗಾಗಿ ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ಆರ್.ಡಿ ನಂಬರ್ ಅವಶ್ಯಕವಾಗಿರುತ್ತದೆ.
ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಗುರುತಿಸಲು ಪರಿಶಿಷ್ಟ ಜಾತಿಗಳಲ್ಲಿ(ಎಸ್.ಸಿ) ಆಂತರಿಕ ಮೀಸಲಾತಿಯ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಕೈಗೊಂಡ ಒಂದು ಮಹತ್ವಕಾಂಕ್ಷಿ ಹಾಗೂ ದಿಟ್ಟ ಹೆಜ್ಜೆಯಾಗಿರುತ್ತದೆ.
ನ್ಯಾಯಯುತ ಮೀಸಲಾತಿ ಹಂಚಿಕೆಗಾಗಿ ಸಮೀಕ್ಷದಾರರಿಗೆ ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ನಿಖರ ಮಾಹಿತಿ ನೀಡುವುದು ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




