Tuesday, November 24, 2026

ಪ್ರಾಯೋಗಿಕ ಆವೃತ್ತಿ

ಒಳಮೀಸಲಾತಿ ಹೋರಾಟ | ವಿಶೇಷ ಸಚಿವ ಸಂಪುಟ ಸಭೆ ರಾತ್ರಿ 7.30 ಕ್ಕೆ ಮುಂದೂಡಿಕೆ

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಠ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ಸಂಜೆ ಐದು ಗಂಟೆಗೆ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಎರಡು ಗಂಟೆಗಳ ಕಾಲ ಮುಂದೂಡಲಾಗಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಂಜೆ 5 ಗಂಟೆಗೆ ನಡೆಯಬೇಕಿದ್ದ ಸಭೆಯನ್ನು ಕಾರಣಣಾಂತರಗಳಿಂದ ಸಂಜೆ 07.30 ಕ್ಕೆ ಮರುನಿಗದಿ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು  ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಹೋರಾಟ ನಡೆಯುತ್ತಿದ್ದು, ಕಳೆದ ಮೂವತ್ತೈದು ವರ್ಷಗಳಿಂದ ಹೋರಾಟದ ನೇತೃತ್ವ ವಹಿಸಿರುವ ಹೋರಾಟಗಾರರ ಸಾಮೂಹಿಕ ನಾಯಕತ್ವದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಡೆಯತ್ತಿರುವ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ.

ಕೃಪೆ : ನಾನು ಗೌರಿ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ