ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ನಡೆಯುವ ಪಂಚಲಿಂಗೋತ್ಸವ ಕಾರ್ಯಕ್ರಮಕ್ಕೆ ಮಂಡ್ಯ ಶಾಸಕ ಪಿ ರವಿಕುಮಾರ್ ಅವರು ಚಲನಚಿತ್ರ ನಟ ಧ್ರುವ ಸರ್ಜಾ ಅವರಿಗೆ ಆಹ್ವಾನ ನೀಡಿದ್ದಾರೆ.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕೆರಗೋಡು ಗ್ರಾಮದಲ್ಲಿ ವಿಜೃಂಭಣೆಯಿಂದ 2ನೇ ಬಾರಿ ನಡೆಯುವ ಪಂಚಲಿಂಗೋತ್ಸವದಲ್ಲಿ ಭಾಗವಹಿಸುವಂತೆ ನೀಡಿದ ಆಹ್ವಾನಕ್ಕೆ ಧ್ರುವ ಸರ್ಜಾ ಸಮ್ಮತಿ ನೀಡಿದರು. ಈ ಸಂದರ್ಭದಲ್ಲಿ ಧ್ರುವ ಸರ್ಜಾ ಅವರನ್ನು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.




