Tuesday, November 24, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ದಸರಾ | ಚಲನಚಿತ್ರ ನಿರ್ದೇಶಕ ನಾಗಾಭರಣಗೆ ಆಹ್ವಾನ

ಸೆ.25 ರಂದು ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಉದ್ಘಾಟಿಸಲಿರುವ ಖ್ಯಾತ ಚಲನಚಿತ್ರ ನಿರ್ದೇಶಕ ನಾಗಾಭರಣ ಅವರಿಗೆ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿ.ಪಂ.ಸಿಇಒ ಕೆ.ಆರ್. ನಂದಿನಿ ಆತ್ಮೀಯವಾಗಿ ಆಹ್ವಾನ ನೀಡಿದರು.

ಇಂದು ಬೆಂಗಳೂರಿನಲ್ಲಿರುವ ಖ್ಯಾತ ಚಲನಚಿತ್ರ ನಿರ್ದೇಶಕ ನಾಗಾಭರಣ ಅವರ ಕಚೇರಿಗೆ ಭೇಟಿ ನೀಡಿ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರ ನಿರ್ದೇಶಕ ನಾಗಾಭರಣ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ನನ್ನ ಸೌಭಾಗ್ಯ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಆಶೀರ್ವದಿಸಲಿ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ