Thursday, November 19, 2026

ಪ್ರಾಯೋಗಿಕ ಆವೃತ್ತಿ

ಗಾಝಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 45ಕ್ಕೂ ಹೆಚ್ಚು ಜನ ಸಾವು

ಉತ್ತರ ಗಾಝಾ ಪ್ರದೇಶದ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದ ವಸತಿ ಕಟ್ಟಡದ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಈ ವೇಳೆ ಕನಿಷ್ಠ 45 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಝಾದ ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ನಿರಾಶ್ರಿತರ ಶಿಬಿರದ ಅಲ್-ಶಿಹಾಬ್ ಕುಟುಂಬದ ಮನೆಯ ಮೇಲೆ ಗುರುವಾರ ಸಂಜೆಯ ವೇಳೆಗೆ ಈ ದಾಳಿ ನಡೆದಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಇಯಾದ್ ಬೋಝುಮ್ ಹೇಳಿದ್ದಾರೆ.

ಅಲ್-ಶಿಹಾಬ್ ಮನೆಯಲ್ಲಿ ಹಲವು ಜನ ಆಶ್ರಯ ಪಡೆದಿದ್ದು, ಆಗ ಅಲ್ಲಿಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ತೀವ್ರ ಬಾಂಬ್ ದಾಳಿಯ ಹಿನ್ನೆಲೆಯಲ್ಲಿ ಬೇರೆಡೆಯಿಂದ ಓಡಿಬಂದು ಈ ಕಟ್ಟಡದಲ್ಲಿ ಆಶ್ರಯ ಪಡೆದಿದ್ದರು ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯವನ್ನು ಪರಿಹಾರ ಕಾರ್ಯಕರ್ತರು ಮುಂದುವರಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಹಮಾಸ್ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಸೇನೆ ಭೂ ದಾಳಿ ನಡೆಸಲು ಸಜ್ಜಾಗುತ್ತಿದ್ದು, ಈಗಾಗಲೇ ಗಾಝಾಪಟ್ಟಿಯುದ್ದಕ್ಕೂ ವಾಯುದಾಳಿಗಳನ್ನು ನಡೆಸುತ್ತಿದೆ. ಇಸ್ರೇಲ್ ಇಡೀ ಪ್ರದೇಶದ ಮೇಲೆ ಆಕ್ರಮಣ ನಡೆಸಿರುವ ಹಿನ್ನೆಲೆಯಲ್ಲಿ ಆಹಾರ, ಇಂಧನ ಮತ್ತು ವೈದ್ಯಕೀಯ ಸಾಧನಗಳ ಕೊರತೆ ಪ್ಯಾಲೆಸ್ತೀನಿಯರನ್ನು ಕಾಡುತ್ತಿದೆ.

ವಾರಾಂತ್ಯದ ದಾಳಿಯಲ್ಲಿ ಹಮಾಸ್ ಸಶಸ್ತ್ರ ಗುಂಪಿನ 150 ಜನರನ್ನು ಒತ್ತೆಯಾಳುಗಳಾಗಿ ಕರೆದೊಯ್ದಿದ್ದು, ಅವರನ್ನು ಬಿಡುಗಡೆ ಮಾಡುವವರೆಗೂ ದಾಳಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ