Thursday, April 18, 2024

ಪ್ರಾಯೋಗಿಕ ಆವೃತ್ತಿ

ದೆಹಲಿ| ಮತ್ತೇ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ದಿಢೀರ್‌ ಮಾತುಕತೆ ನಡೆಸಿದ್ದು, ಅದು ಈಗ ಯಶಸ್ವಿಯಾಗಿದೆ. ದೆಹಲಿಯಲ್ಲಿ ಶೆಟ್ಟರ್‌ ಅವರು ಬಿ ಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಹಿಂದಿರುಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ದಿಢೀರ್‌ ಆಗಿ ಶೆಟ್ಟರ್‌ ಅವರು ಮಾತುಕತೆ ನಡೆಸಿದರು.

ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಜೊತೆಯಲ್ಲಿ ಶೆಟ್ಟರ್‌ ಅವರು ದೆಹಲಿಗೆ ಭೇಟಿ ನೀಡಿದ್ದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕೂಡ ದೆಹಲಿಯಲ್ಲಿದ್ದರು. ಇವರೆಲ್ಲರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಅವರು ಗುರುವಾರ ಮಹತ್ವದ ಮಾತುಕತೆ ನಡೆಸಿದ್ದರು.

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಹತಾಶಗೊಂಡಿರುವ ಬಿಜೆಪಿಯ ಕೆಲವು ನಾಯಕರು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!