Friday, November 20, 2026

ಪ್ರಾಯೋಗಿಕ ಆವೃತ್ತಿ

ಬೆಲ್ಲಕ್ಕೆ ಜಿಎಸ್‌ಟಿ ವಿರೋಧಿಸಿ ಪ್ರತಿಭಟನೆ

ರೈತರು ಉತ್ಪಾದಿಸುವ ಬೆಲ್ಲಕ್ಕೆ ಶೇ.5ರಷ್ಟು ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಹಾಗೂ ಟನ್ ಕಬ್ಬಿಗೆ 4500 ರೂ.ನೀಡಬೇಕೆ‌ಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ ತಾಲ್ಲೂಕಿನ ಕೆಬ್ಬಹಳ್ಳಿ ಗ್ರಾಮದಲ್ಲಿ ಸೇರಿದ ಕರ್ನಾಟಕ ರಾಜ್ಯ ರೈತ ಸಂಘದ ಸಹಸ್ರಾರು ಕಾರ್ಯಕರ್ತರು ಬಳಿಕ ಅಲ್ಲಿಂದ 150 ಕ್ಕೂ ಹೆಚ್ಚು ಟ್ರಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ಮಂಡ್ಯ ನಗರಕ್ಕೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿ ಕೇಂದ್ರ ಸರ್ಕಾರ ರೈತವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಬೆಲ್ಲಕ್ಕೂ ಜಿಎಸ್​ಟಿ ಹಾಕುವ ಮೂಲಕ ರೈತರ ಅನ್ನೋ ಸಂಕಷ್ಟಕ್ಕೆ ದೂಡಿದೆ ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ಜಿಎಸ್‌ಟಿಯನ್ನು ಜಾರಿಗೆ ತಂದಿದ್ದು ಕೂಡಲೇ ಹಿಂಪಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ರೈತರ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ.ಕೇಂದ್ರ ಸರ್ಕಾರ ರೈತರನ್ನು ಕಡೆಗಣಿಸಿ ಬಂಡವಾಳಶಾಹಿಗಳ ಪರ ನೀತಿ ಜಾರಿಗೆ ತರುವ ಮೂಲಕ ರಯುತ ವಿರೋಧಿಯಾಗಿದೆ ಎಂಉ ಕಿಡಿಕಾರಿದರು.

ರೈತರ ಪ್ರತಿ ಟನ್ ಕಬ್ಬಿಗೆ 4500 ರೂ. ನಿಗಧಿ ಮಾಡಬೇಕು. ಬೆಲ್ಲಕ್ಕೆ ಜಿ ಎಸ್ ಟಿ ಹಾಕುವುದನ್ನು ಬಿಟ್ಟು ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ರಸ್ತೆತಡೆ

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ನೂರಾರು ಸಂಖ್ಯೆಯಲ್ಲಿಎತ್ತಿನಗಾಡಿಗಳು ಹಾಗೂ ಟ್ಯಾಕ್ಟರ್ ಗಳಲ್ಲಿ ಆಗಮಿಸಿದಾಗ ಪೊಲೀಸರು ಅವರನ್ನು ತಡೆದರು. ಆಗ ರೊಚ್ಚಿಗೆದ್ದ ರೈತರು ಪೊಲೀಸರು ಹಾಗೂ ರೈತ ನಾಯಕರಾದ ಬಡಗಲಪುರ ನಾಗೇಂದ್ರ, ಚಿಕ್ಕಾಡೆ ಹರೀಶ್,ಮಧುಚಂದನ್ ಸೇರಿದಂತೆ ಹಲವು ನಾಯಕರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಾವು ಜಿಲ್ಲಾಧಿಕಾರಿ ಕಚೇರಿಯ ಬಳಿ ಹೋಗಬೇಕು. ಜಿಲ್ಲಾಧಿಕಾರಿಗಳೇ ನಮ್ಮ ಅಹವಾಲು ಆಲಿಸಬೇಕು ಎಂದು ತಿಳಿಸಿದಾಗ ಪೊಲೀಸರು ಅವಕಾಶ ಕೊಡಲಿಲ್ಲ‌. ಆಗ ರೈತರು ಮೈಸೂರು-ಬೆಂಗಳೂರು ಮುಖ್ಯ ರಸ್ತೆಯ ಎರಡೂ ಕಡೆ ಟ್ರಾಕ್ಟರ್ ಗಳನ್ನು ನಿಲ್ಲಿಸಿ ಎರಡು ಕಡೆಯಿಂದಲೂ ಸಂಚಾರಕ್ಕೆ ತಡೆಯೊಡ್ಡಿದರು. ಆಗ ಪೊಲೀಸರು ಬ್ಯಾರಿಕೇಡ್ ಗಳನ್ನು ತೆರವುಗೊಳಿಸಿ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಮೆರವಣಿಗೆಯಲ್ಲಿ ತೆರಳಲು ಅವಕಾಶ ಮಾಡಿಕೊಟ್ಟರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ರೈತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಕಾರ್ಯದರ್ಶಿ ಲಿಂಗಪ್ಪಾಜಿ, ರೈತ ಮುಖಂಡರಾದ ಚಿಕ್ಕಾಡೆ ಹರೀಶ್, ಆರ್ಗ್ಯಾನಿಕ್ ಮಧುಚಂದನ್, ಪ್ರಸನ್ನ ಎನ್.ಗೌಡ ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ