Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆ ಬಾಬು ಜಗಜೀವನ್ ರಾಂ ಪುಣ್ಯತಿಥಿ ; ಸಚಿವರಿಂದ ಮಾಲಾರ್ಪಣೆ

ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಅಂಗವಾಗಿ ಜುಲೈ 6 ರಂದು ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬೆಳಿಗ್ಗೆ 9:45 ಗಂಟೆಗೆ ಮೈಸೂರು ಶುಗರ್ ಕಾರ್ಖಾನೆಯ 2023-24 ನೇ ಸಾಲಿನ ಮಿಲ್ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ  ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ