Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ: ಎಸ್ಸಿ – ಎಸ್ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಬಗ್ಗೆ ಅರಿವು

ಮಳವಳ್ಳಿ : ಕಿರುಗಾವಲು ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.

ಮಳವಳ್ಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ. ಪೋಲಿಸ್ ಇಲಾಖೆ. ಕಿರುಗಾವಲು ಗ್ರಾಮ ಪಂಚಾಯತಿ ಇವರ ಸಹಯೋಗದಲ್ಲಿ ಹೊಂಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಕಿರುಗಾವಲು ಪ್ರೌಢಶಾಲಾ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದ ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ಮಾತನಾಡಿದರು.

ಶಾಲಾ ಮತ್ತು ಕಾಲೇಜು ದಿನಗಳಲ್ಲಿ ಸಾಮರಸ್ಯದ ಜೀವನ ನೆಡೆಸುವ ನಾವು ವಯಸ್ಕರಾಗುತ್ತಿದ್ದಂತೆ ಜಾತಿಯ ಮದವನ್ನು ತಲೆಗೇರಿಸಿಕೊಂಡು ದೂರಾಗುತ್ತಿದ್ದೇವೆ. ಇದು ಸಮಾಜದಲ್ಲಿ ಬದಲಾಗಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೆ ಮಕ್ಕಳಿಗೆ ಜಾಗೃತಿ ಮೂಡಿಸುತ್ತಿರುವ ಹೊಂಬೆಳಕು ಚಾರಿಟಬಲ್ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಪ್ರಶಂಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಪರಿಮಳ ಮಾತನಾಡಿ ಮಕ್ಕಳು ಬಾಲ್ಯದಿಂದಲೇ ಸಂವಿಧಾನದ ಪುಟಗಳನ್ನು ಅಭ್ಯಾಸ ಮಾಡುವ ಮೂಲಕ ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.

ಪಿಡಿಓ ಹರಿಶಂಕರ್ ಮಾತನಾಡಿ ತಾಲ್ಲೂಕಿನಲ್ಲಿ ಅಟ್ರಾಸಿಟಿ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕೆಲಸ ಎಂದು ಅಭಿಪ್ರಾಯ ಪಟ್ಟರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಾಂದ್ ಪೀರ್. ಗ್ರಾಮ ಪಂಚಾಯತಿ ಅಧ್ಯಕ್ಷೆ ಇನಿಯತ್ ಕಾತೂನ್. ಉಪಾಧ್ಯಕ್ಷ ಮಾದೇಗೌಡ.ಶಿಕ್ಷಕ ಕೃಷ್ಣೇಗೌಡ.ಮತ್ತು ಟ್ರಸ್ಟ್ ನ ಪದಾಧಿಕಾರಿಗಳಾದ ಮಂಜುನಾಥ್. ಸುರೇಶ್.ಪ್ರಸನ್ನಕುಮಾರ್. ಮತ್ತು ಮಳವಳ್ಳಿ ಶ್ರೀನಿವಾಸ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ