Friday, September 20, 2024

ಪ್ರಾಯೋಗಿಕ ಆವೃತ್ತಿ

ರೇಣುಕಸ್ವಾಮಿ ಕೊಲೆ ಪ್ರಕರಣ| ದರ್ಶನ್‌ ಮತ್ತು ಗ್ಯಾಂಗ್ ಗೆ ಮತ್ತೆ 14 ದಿನ ಜೈಲು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ. ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಇತರೆ 17 ಆರೋಪಿಗಳ ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆ ಇಂದು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ವಿಚಾರಣೆ ನಂತರ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಮನೆ ಊಟಕ್ಕೂ ನೋ ಎಂದ ಕೋರ್ಟ್!

ಕಳೆದ ಒಂದು ತಿಂಗಳಿಂದ ಪೊಲೀಸರ ವಿಚಾರಣೆ, ಜೈಲೂಟ, ಚಾಪೆಗೆ ಒಗ್ಗಿಕೊಳ್ಳಲಾಗದೇ ಪರದಾಡುತ್ತಿರುವ ದರ್ಶನ್ ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ದರ್ಶನ್ ಮನೆ ಊಟದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯಲ್ಲಿ ಕಾನೂನಿನ ಅವಕಾಶಗಳ ಬಗ್ಗೆ ಮೊದಲು ನೋಡೋಣ. ಅದು ಅನುಮತಿಸುತ್ತಾ, ಇಲ್ವಾ ನೋಡೋಣ ಎಂದಿದೆ. ಇದೇ ವೇಳೆ ಎರಡು ಕಡೆಯ ವರದಿ ಸ್ವೀಕಾರ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!