ಅಡುಗೆ ಅನಿಲ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಎಲ್ಲ ಬಿಜೆಪಿ ನಾಯಕರಿಗೆ ನಮಸ್ಕಾರ,
ತಾವೆಲ್ಲ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ಇವತ್ತು ಕೇಂದ್ರ ಬಿಜೆಪಿ ಸರ್ಕಾರ ನಿಮಗೆ ಕಪಾಳ ಮೋಕ್ಷ ಮಾಡಿದೆ.ಕೇಂದ್ರ @BJP4India ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದೆ.
ಈ ಬೆಲೆ ಏರಿಕೆ ವಿರುದ್ಧ @BJP4Karnataka ನಾಯಕರು ತಮ್ಮ ‘ಜನಕ್ರೋಶ ಯಾತ್ರೆ’ ನಡೆಸುವಂತೆ… pic.twitter.com/UoQYbK2P49
— Karnataka Congress (@INCKarnataka) April 8, 2025
“>
ಈ ಸಂಬಂಧ ಎಕ್ಸ್ ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, ಎಲ್ಲಾ ಬಿಜೆಪಿ ಸ್ನೇಹಿತರಿಗೆ ನಮಸ್ಕಾರ, ತಾವೆಲ್ಲರೂ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ನಾನು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇನೆ. ಕೇಂದ್ರ ಸರ್ಕಾರ ನಿಮಗೆ ಕಪಾಳಮೋಕ್ಷ ಮಾಡಿದೆ. ಈ ಜನಾಕ್ರೋಶ ಯಾತ್ರೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಪ್ರೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದು ನಿಮಗೆಲ್ಲ ತಿಳಿದಿದೆ. ತಮ್ಮ ಆಕ್ರೋಶವನ್ನು ನಿಮ್ಮ ಕೇಂದ್ರ ಸರ್ಕಾರ ವಿರುದ್ಧ ಮುಂದುವರಿಸಬೇಕು ಎಂದು ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ, 16 ದಿನಗಳ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ಪ್ರಾರಂಭಿಸಿದೆ.




