Sunday, May 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ | ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಮಾರ್ಚ್‌ 25ರಂದು ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿ, ಅಧಿಕೃತವಾಗಿ ಬಿಜೆಪಿಗೆ ಸೇರಿಲಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾರ್ಚ್‌ 25ರಂದು ಅಧಿಕೃತವಾಗಿ ಮರಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆ. ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದಾರೆ. ಚಿಕ್ಕವಯಸ್ಸಿನಿಂದಲೂ ನಾನು ಬಿಜೆಪಿಯಲ್ಲಿದ್ದೇನೆ. ತಾಯಿ ಸಮಾನವಾಗಿರುವ ಬಿಜೆಪಿಗೆ ಮರಳೋದಕ್ಕಿಂತ ಮುಂಚೆ ನನ್ನ ಕಷ್ಟದೊಂದಿಗೆ ಇದ್ದ ರಾಯಚೂರು, ಬಳ್ಳಾರಿ, ವಿಜಯಪುರ, ಕೊಪ್ಪಳದ ಸೇರಿದಂತೆ ಇನ್ನಿತರ ಜಿಲ್ಲೆಯ ಎಲ್ಲ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದೇನೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಈ ತಿರ್ಮಾನ ಕೈಗೊಂಡಿದ್ದೇನೆ. ಕಾರ್ಯಕರ್ತರು ಒಪ್ಪಿಗೆ ಸೂಚಿಸಿದ್ದಾರೆ” ಎಂದರು.

“ಮಾರ್ಚ್‌ 25ರಂದು ಬೆಳಿಗ್ಗೆ 10 ಗಂಟೆಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದೇನೆ. ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟು ಪ್ರಚಾರ ಮಾಡಬೇಕು ಎಂಬ ಉದ್ದೇಶವಿತ್ತು. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ. ನಮ್ಮ ಪ್ರಧಾನಮಂತ್ರಿ ಅವರಿಂದ ಇಡೀ ವಿಶ್ವದಲ್ಲಿಯೇ ಭಾರತಕ್ಕೆ ಒಂದು ಒಳ್ಳೆಯ ಹೆಸರು ಬಂದಿದೆ. ಪಕ್ಷದಲ್ಲಿಯೇ ಸೇರ್ಪಡೆಯಾಗುವ ಮೂಲಕ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ, ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕೆಆರ್‌ಪಿಪಿ ಒಂದೇ ಸ್ಥಾನ ಗೆದ್ದಿದ್ದರೂ ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಏಟು ನೀಡಿತ್ತು. ಕೆಲ ದಿನಗಳ ಹಿಂದೆ ಗೃಹ ಸಚಿವ ಅಮಿತ್‌ ಶಾ ಅವರನ್ನು ಜನಾರ್ದನ ರೆಡ್ಡಿ ಭೇಟಿ ಮಾಡಿ ಚರ್ಚಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!