ಮಂಡ್ಯ ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜುಲೈ 5 ರಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.
ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಜನರ ಸಮಸ್ಯೆಗಳನ್ನು ಸಚಿವ ಕುಮಾರಸ್ವಾಮಿ ಆಲಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡುವಂತೆ ಕೇಂದ್ರ ಸಚಿವರ ಕಚೇರಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕುಮಾರ ಅವರಿಗೆ ಪತ್ರ ಮುಖೇನ ತಿಳಿಸಲಾಗಿದೆ.