ಮಂಡ್ಯ ವಿಧಾನಸಭಾ ಕ್ಷೇತ್ರದ ಮುತ್ತೇಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮೂರನೇ ಬಾರಿಗೆ ಶಾಸಕ ರವಿಕುಮಾರ್ ಜನತಾ ದರ್ಶನ ನಡೆಸಿ ಜನರ ಸಮಸ್ಯೆಗಳನ್ನು ಆಲಿಸುವ ಮೂಲಕ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ್ಧಾರೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು, ನಿಷ್ಪಕ್ಷಪಾತವಾಗಿ ಎಲ್ಲರೂ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳಬೇಕು ನಿಮ್ಮ ಸೇವೆಗೆ ನಾವು ಸದಾ ಸಿದ್ಧವಾಗಿರುತ್ತೇನೆ, ಮನೆಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಕೊಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿತವಾಗಿದೆ ನೀವು ಕೊಡುವ ಅರ್ಜಿಗಳನ್ನು ಪರಿಶೀಲಿಸಿ ಸ್ಥಳದಲ್ಲೇ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ನಿಗದಿತ ದಿನದಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ನಾವು ಕೆಲಸ ನಿರ್ವಹಿಸುತ್ತೇವೆ, ಮುತ್ತೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈವರೆಗೂ ರಸ್ತೆ,ಕುಡಿಯುವ ನೀರು,ಸಮುದಾಯ ಭವನ, ಕೆರೆ ಅಚ್ಚು ಕಟ್ಟು ಸೇರಿದಂತೆ 40 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ,ಆರೋಗ್ಯ ಇಲಾಖೆ,ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಮಹಿಳಾ,ವಿದ್ಯುತ್ ಇಲಾಖೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಹಾರ ಇಲಾಖೆಗಳು ಭಾಗವಹಿಸಿ ಇಲಾಖೆಯ ಯೋಜನೆಗಳನ್ನು ಜನರಿಗೆ ತಿಳಿಸಿಕೊಟ್ಟರು.
ಈ ದಿನದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆರೋಗ್ಯ ಇಲಾಖೆ ವತಿಯಿಂದ ಬಾಣಂತಿಯರಿಗೆ ಮಡಿಲು ತುಂಬ ಶಾಸ್ತ್ರ ಮಾಡಲಾಯಿತು,ಸ್ಥಳದಲ್ಲಿ 10 ಅರ್ಜಿಗಳ ಸಮಸ್ಯೆಗಳನ್ನು ಬಗೆಹರಿಸಿದ್ದು ಉಳಿದಂತೆ ಕಂದಾಯ ಇಲಾಖೆ-43,ಗ್ರಾಮ ಪಂಚಾಯಿತಿ-30, ಆಹಾರ ಇಲಾಖೆ-05, ವಿದ್ಯುತ್ ಇಲಾಖೆ -06, ಅರಣ್ಯ ಇಲಾಖೆ -05, ಇತರೆ ಇಲಾಖೆಗಳಿಂದ-15, ಪೌತಿಖಾತೆ ಅರ್ಜಿಗಳು 16 ಸೇರಿದಂತೆ 120 ಖರ್ಚುಗಳನ್ನು ಸ್ವೀಕಾರ ಮಾಡಲಾಗಿದೆ.

ಈ ದಿನ ವಿಶೇಷವಾಗಿ ಆರೋಗ್ಯ ತಪಾಸಣೆ ಹಾಗೂ ಕಣ್ಣು ತಪಾಸಣೆ ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ಮಂದಿ ಆರೋಗ್ಯ ಸೇವೆಯನ್ನು ಪಡೆದಿದ್ದಾರೆ. ಪ್ರಮುಖವಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಯೋಜನೆ ಸವಲತ್ತುಗಳಿಂದ ವಂಚಿತರಾಗಿರುವ ಮತ್ತು ಜನರಿಗೆ ಸೇವೆಯನ್ನು ಒದಗಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಂಡ್ಯ ಉಪವಿಗಾಗಿ ಅಧಿಕಾರಿ ಶಿವಮೂರ್ತಿ, ಮಂಡ್ಯ ತಾಲೂಕು ದಂಡಾಧಿಕಾರಿ ಶಿವಕುಮಾರ್ ಬಿರಾದರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ ಗೌಡ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಿ, ಯತಿರಾಜ್, ಕೆಂಚನಹಳ್ಳಿ ರಾಜು ಹಾಗೂ ಇತರ ಮುಖಂಡರು ಭಾಗವಹಿಸಿದ್ದರು.




