ಮಳವಳ್ಳಿ ತಾಲ್ಲೂಕಿನ ದೇವಿಪುರ ಗ್ರಾಮದ ಗ್ರಾಮಸ್ಥರಿಗೆ ಎರಡು ತಿಂಗಳಿಂದ ಅನ್ನಭಾಗ್ಯದ ಯೋಜನೆಯ ಪಡಿತರ ರೇಷನ್ ವಿತರಿಸದ ಅಧಿಕಾರಿಗಳ ವಿರುದ್ದ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಎರಡು ತಿಂಗಳಿಂದ ಅನ್ನಭಾಗ್ಯ ನೀಡಿಲ್ಲ ಎಂದು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ಬರುವುದು ವಿಳಂಬವಾದ ಹಿನ್ನಲೆಯಲ್ಲಿ ತಾಲ್ಲೂಕು ಕಚೇರಿಗೆ ಬೀಗ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದು ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮುಕಿ ನಡೆಯಿತು.
ನಂತರ ತಹಸೀಲ್ದಾರ್ ಲೋಕೇಶ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು ಬಳಿಕ ತಹಸೀಲ್ದಾರ್ ಲೋಕೇಶ್ ಮಾತನಾಡಿ, ಇಲಾಖೆಯಿಂದ ಅನ್ನಭಾಗ್ಯದ ಅಕ್ಕಿ ಸರಬರಾಜು ಮಾಡಲಾಗಿದ್ದು, ಇದರ ಬಗ್ಗೆ ತನಿಖೆ ನಡೆಸಿ, ವಿತರಣೆ ಮಾಡದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಜೊತೆಗೆ ನಾಳೆ ಸಂಜೆಯೊಳಗೆ ಎರಡು ತಿಂಗಳ ಅನ್ನಭಾಗ್ಯದ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ವಾಪಸ್ಸಾದರು.
ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ರಾಜ್ಯ ಕಾರ್ಯದರ್ಶಿ ದೇವಿ,ಸುಶೀಲ, ಮಂಜುಳಾ, ಭರತ್ ರಾಜ್ ಇದ್ದರು.




