ಜಯರಾಮ್ ರಾಯಪುರ ಅಭಿನಂದನಾ ಸಮಿತಿ ವತಿಯಿಂದ ಆಂಧ್ರಪ್ರದೇಶದ ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರಾಗಿ ನೇಮಕಗೊಂಡ ‘ಜಯರಾಮ್ ರಾಯಪುರ ಅಭಿನಂದನಾ ಸಮಾರಂಭ’ ವನ್ನು ನ.೧ರಂದು ಮಧ್ಯಾಹ್ನ ೩ ಗಂಟೆಗೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್‌ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಕರ್ನಾಟಕ ಸಂಘ, ಫಸ್ಟ್ ಸರ್ಕಲ್ ಸಹಕಾರದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿದೆ ಎಂದರು.
ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆಯ ಕಾರ್ಯಕ್ರಮವನ್ನು ಶಾಸಕ ಪಿ.ರವಿಕುಮಾರ್ ಗೌಡ ಉದ್ಘಾಟಿಸುವರು. ಜಯರಾಮ್ ರಾಯಪುರ ದಂಪತಿಗಳನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅಭಿನಂದಿಸಲಿದ್ದಾರೆ. ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ.ಭೈರಮಂಗಲ ರಾಮೇಗೌಡ ಅಭಿನಂದನಾ ನುಡಿಗಳನ್ನಾಡುವರು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಬಿ.ರಾಮಕೃಷ್ಣ, ಕೆ.ಟಿ.ಶ್ರೀಕಂಠೇಗೌಡ, ಹಾಲಿ ಶಾಸಕ ಮಧು ಜಿ.ಮಾದೇಗೌಡ, ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಎಸ್‌ಬಿಇಟಿ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ, ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ, ಫಸ್ಟ್ ಸರ್ಕಲ್ ಅಧ್ಯಕ್ಷ ಡಾ.ಡಿ.ಮುನಿರಾಜು, ಕೆನರಾ ಬ್ಯಾಂಕ್ ಪ್ರಭಾರ ವ್ಯವಸ್ಥಾಪಕ ಡಾ.ಎಸ್.ಟಿ.ರಾಮಚಂದ್ರ, ಉದ್ಯಮಿ ಟಿ.ಜೆ.ಪ್ರಸನ್ನಕುಮಾರ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಲೇಖಕಿ ಡಾ.ಕೆಂಪಮ್ಮ ಅವರು ಜಯರಾಮ್ ರಾಯಪುರ ಅವರ ೨೫೦ ಪುಟಗಳ ‘ಪ್ರಗತಿಯ ಹರಿಕಾರ’ ಜೀವನ ಚರಿತ್ರೆಯ ಪುಸ್ತಕವನ್ನು ಇದೇ ವೇಳೆ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಎಸ್‌ಬಿಇಟಿ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ, ಕರ್ನಾಟಕ ಸಂಘದ ನಿರ್ದೇಶಕರಾದ ನಾಗರೇವಕ್ಕ, ಕೆ.ಎಚ್.ಜಯರಾಮ್ ಹಾಗೂ ಚಂದ್ರು ಇದ್ದರು.




