ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಇಂದು ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಮಧ್ಯೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು.
ಮೈಸೂರಿನಲ್ಲಿರುವ ಶಾಸಕ ರವೀಂದ್ರ ಶ್ರೀಕಂಠಯ್ಯನವರ ನಿವಾಸಕ್ಕೆ ಇಂದು ಬೆಳಿಗ್ಗೆಯಿಂದಲೇ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಆಗಮಿಸಿ ಶಾಸಕ ರವೀಂದ್ರ ಶ್ರೀಕಂಠಯ್ಯನವರಿಗೆ ಜನ್ಮದಿನದ ಶುಭಾಶಯ ಕೋರಿದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕ ರವೀಂದ್ರ ಶ್ರೀಕಂಠಯ್ಯನವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಗೆದ್ದು ಶ್ರೀರಂಗಪಟ್ಟಣ ಶಾಸಕರಾಗಿ ಆಯ್ಕೆಯಾಗಿ ಎಂದು ಶುಭ ಹಾರೈಸಿದರು.

ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ರವೀಂದ್ರ ಶ್ರೀಕಂಠಯ್ಯನವರು ಜನ್ಮದಿನವನ್ನು ಆಚರಿಸಿಕೊಂಡಿರಲಿಲ್ಲ. ಈ ಬಾರಿಯೂ ಜನ್ಮದಿನ ಆಚರಣೆ ಬೇಡ ಎಂದು ಎಷ್ಟು ಹೇಳಿದರೂ ಕೇಳದ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜನ್ಮದಿನ ಆಚರಿಸಬೇಕೆಂದು ಪಟ್ಟು ಹಿಡಿದರು.ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಗೆದ್ದು ಶ್ರೀರಂಗಪಟ್ಟಣ ಶಾಸಕರಾಗಿ ಆಯ್ಕೆಯಾಗಿ ಎಂದು ಶುಭ ಹಾರೈಸಿದರು.
ಈ ಹಿನ್ನೆಲೆಯಲ್ಲಿ ಇಂದು ತಮ್ಮ ನಿವಾಸದಲ್ಲಿ ರವೀಂದ್ರ ಶ್ರೀಕಂಠಯ್ಯ ಸರಳವಾಗಿ ಜನ್ಮದಿನ ಆಚರಿಸಿಕೊಂಡರು.
ಬೆಳಿಗ್ಗೆಯಿಂದಲೇ ಕಾರ್ಯಕರ್ತರು, ಅಭಿಮಾನಿಗಳು ಶಾಸಕರ ನಿವಾಸಕ್ಕೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಜಿ.ಪಂ.ಮಾಜಿ ಸದಸ್ಯ ಮರಿಗೌಡ, ಪುರಸಭೆ ಸದಸ್ಯ ಸಿ.ಸಿ. ಪ್ರಕಾಶ್, ಮಾಜಿ ಸದಸ್ಯ ಸಾಯಿ ಪ್ರಕಾಶ್, ಜೆಡಿಎಸ್ ಮುಖಂಡರಾದ ಸುರೇಶ್ ನಗುವನಹಳ್ಳಿ ಶಿವಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರು, ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಶಾಸಕ ರವೀಂದ್ರ ಶ್ರೀಕಂಠಯ್ಯನವರಿಗೆ ಜನ್ಮದಿನದ ಶುಭಾಶಯ ಕೋರಿದರು.




