Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಜೆಡಿಎಸ್ ಶಾಸಕರನ್ನು ಆಯ್ಕೆಗೊಳಿಸಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯ : ಎಸ್.ಪಿ. ಸ್ವಾಮಿ

ವರದಿ : ಪ್ರಭು ವಿ.ಎಸ್.

ಜಿಲ್ಲೆಯ ಜನರು 7 ಮಂದಿ ಜೆಡಿಎಸ್ ಶಾಸಕರನ್ನು ಆಯ್ಕೆಗೊಳಿಸಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯವಾಗಿದ್ದು ಯಾವುದೇ ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಬಿಜೆಪಿ ಅಭ್ಯರ್ಥಿ ಎಸ್.ಪಿ. ಸ್ವಾಮಿ ಆರೋಪಿಸಿದರು.

ಮದ್ದೂರು ತಾಲೂಕಿನ ಬೆಸಗರಹಳ್ಳಿ ಜಿ.ಪಂ. ವ್ಯಾಪ್ತಿಯ ಕೆ. ಕೋಡಿಹಳ್ಳಿ ಗ್ರಾಮದಲ್ಲಿ ಬಿರುಸಿನ ಮತಪ್ರಚಾರ ಕೈಗೊಂಡು ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದಲೂ ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದು ಎರಡು ಪಕ್ಷಗಳು ರೈತರ ಪರ ಧನಿ ಎತ್ತದ ಕಾರಣ ಸಂಕಷ್ಟಕ್ಕೀಡಾಗಿದ್ದು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಕ್ಕರೆ ಕಾರ್ಖಾನೆ ಆರಂಭಿಸಿ ರೈತರ ಹಿತ ಕಾಯ್ದಿದ್ದಾರೆಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ ಪರ ಯೋಜನೆಗಳನ್ನು ಜಾರಿಗೊಳಿಸುವ ಜತೆಗೆ ಪ್ರತಿಯೊಂದು ಕುಟುಂಬಕ್ಕೂ ಹಲವು ಯೋಜನೆಗಳನ್ನು ಕಲ್ಪಿಸಿದ್ದು ಮತ್ತಷ್ಟು ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸಲು ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ತಾಲೂಕಿನ ನಿಲುವಾಗಿಲು, ಎನ್. ಕೋಡಿಹಳ್ಳಿ, ಮುದಿಗೆರೆ, ಅರೆಕಲ್ಲುದೊಡ್ಡಿ ಇನ್ನಿತರೆ ಗ್ರಾಮಗಳಲ್ಲಿ ಮತ ಪ್ರಚಾರ ಕೈಗೊಂಡರು.

ಈ ವೇಳೆ ಜಿ.ಪಂ. ಮಾಜಿ ಸದಸ್ಯ ಮರಿಹೆಗಡೆ, ಸ್ಥಳೀಯ ಮುಖಂಡರಾದ ನಾಗೇಶ್, ಹನುಮಂತು, ರಾಜಶೇಖರ್, ಶಶಿಕುಮಾರ್, ಚಂದ್ರ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ