Thursday, November 19, 2026

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣದಲ್ಲಿ ಜೆಡಿಎಸ್ ಹಣದ ಹೊಳೆ ಕೆಲಸ ಮಾಡೋದಿಲ್ಲ : ಚಲುವರಾಯಸ್ವಾಮಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಹಣದ ಹೊಳೆ ಕೆಲಸ ಮಾಡುವುದಿಲ್ಲ, ಕಾರ್ಯಕರ್ತರ ಕೆಲಸವಷ್ಟೇ ಮತಗಳಾಗಿ ಬದಲಾವಣೆಯಾಗಲು ಸಾಧ್ಯ. ಚುರುಕಾಗಿ ಚುನಾವಣಾ ಕಾರ್ಯಗಳಲ್ಲಿ ಸಕ್ರಿಯರಾಗಿ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ತಮ್ಮ ಉಸ್ತುವಾರಿ ಪ್ರದೇಶ ಕೋಡಂಬಳ್ಳಿ ಜಿಲ್ಲಾ ಪಂಚಾಯಿತಿಯ ಗ್ರಾಮಗಳಲ್ಲಿನ ಕಾರ್ಯಕರ್ತರು ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಏಳು ಮಂದಿ ಶಾಸಕರಿದ್ದರು ಅವರು ಎಷ್ಟೇ ಹಣದ ಹೊಳೆ ಹರಿಸಿದರೂ, ಅಧಿಕಾರದ ಪ್ರಭಾವ ಬೀರಿದರೂ ನಿಖಿಲ್ ಅವರ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಕಾರ್ಯಕರ್ತರು ನೆನಪಿಸಿಕೊಳ್ಳುವಂತೆ ಮಾಡಿದರು.

ವಿರೂಪಾಕ್ಷಪುರ ಹೋಬಳಿಯ ಬಿ.ವಿ.ಹಳ್ಳಿ ಕೆರೆ ತುಂಬಿಸುವುದಷ್ಟೇ ಅಲ್ಲ, ಡಿ.ಕೆ.ಶಿವಕುಮಾರ್ ಅವರು ನೀರಾವರಿ ಮಂತ್ರಿಯೂ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಯೋಗೇಶ್ವರ್ ನೀರಾವರಿಗೆ ಪ್ರಾರಂಭಿಸಿ ಅರ್ಧಕ್ಕೆ ನಿಂತ ಎಲ್ಲಾ ಕೆಲಸಗಳು ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಅದನ್ನೂ ಮೀರಿ ಮತ್ತೆ ಕುಮಾರಸ್ವಾಮಿ ಬೆಂಬಲಿಸಿದರೆ ಅವರು ಸಮಸ್ಯೆ ಕೇಳೋದಿಲ್ಲ, ನಿಮ್ಮ ಕೈಗೂ ಸಿಗುವುದಿಲ್ಲ, ಅಭಿವೃದ್ಧಿಗೆ ಸಹಾಯಾಸ್ತ ಕೇಳಲು ಯಾವ ನೈತಿಕತೆಯು ಚನ್ನಪಟ್ಟಣ ಮತದಾರರಿಗೆ ಇಲ್ಲದಂತೆ ಆಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ತಿಳುವಳಿಕೆ ತುಂಬಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಾಜಿ ಶಾಸಕ ಅಶ್ವಥ್ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ