ಫೆ.14ರಂದು ರಾಜ್ಯ ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ ಎಂದು ಕೆ.ಆರ್. ಪೇಟೆ ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ, ವಕೀಲ ವಿ ಎಸ್ ಧನಂಜಯ್ ಕುಮಾರ್ ತಿಳಿಸಿದರು.
ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೂರಾರು ಬೆಂಬಲಿಗರು ಹಾಗೂ ಸ್ನೇಹಿತರು ಹಾಗೂ ಹಿತೈಷಿಗಳೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಮಂಜು ಅವರ ನಾಯಕತ್ವ ಒಪ್ಪಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ ಹಾಗೂ ಇನ್ನಿತರ ಜೆಡಿಎಸ್ ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ ಹೆಚ್ ಟಿ ಮಂಜು ಅವರಿಗೆ ಚುನಾವಣೆಯಲ್ಲಿ ನಿಗದಿಪಡಿಸಿರುವ ಠೇವಣಿ ಹಣವನ್ನು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ನಿಖಿಲ್ ಕುಮಾರಸ್ವಾಮಿ ಅವರ ಮೂಲಕ ಮಂಜು ಅವರಿಗೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವೇಗೌಡ, ಎಲ್ ಐ ಸಿ ಶಿವಪ್ಪ, ಅಕ್ಕಿಹೆಬ್ಬಾಳು ಹೋಬಳಿ ಅಧ್ಯಕ್ಷ ಬಸವಲಿಂಗಪ್ಪ, ಬೀರುವಳ್ಳಿ ಸೊಸೈಟಿ ಅಧ್ಯಕ್ಷ ಈರೇಗೌಡ, ಟೌನ್ ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ ಅಂಬೇಡ್ಕರ್ ನಗರ ಗಣೇಶ್, ಹೊಸಹೊಳಲು ಗೋಪಾಲ್, ಮಹದೇವೇಗೌಡ, ಅಲೋಕ್, ಲಿಂಗಾಪುರ ಶಿವಪ್ಪ, ನಂಜುಂಡಪ್ಪ, ಸ್ವಾಮಿಗೌಡ, ಮಾ ಕವಳ್ಳಿ ನಾಗೇಶ್, ಅಲ್ಲಮಪ್ರಭು, ರೆಬೆಲ್ ರವಿ, ಚಂದ್ರಪ್ಪ, ನಾಗಪ್ಪ, ರಾಜಣ್ಣ, ಲಕ್ಷ್ಮಣ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.




