Thursday, November 19, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕದಲ್ಲಿ ಉತ್ತರದ ರಾಜ್ಯಗಳ ವಲಸಿಗರ ದೌರ್ಜನ್ಯ ಖಂಡನೀಯ : ಜೆಡಿಎಸ್ ಕಿಡಿ

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕದಲ್ಲಿ ಉತ್ತರದ ರಾಜ್ಯಗಳ ವಲಸಿಗರ ದೌರ್ಜನ್ಯ ಖಂಡನೀಯ ಎಂದು ಜಾತ್ಯತೀತ ಜನತಾದಳ ಪಕ್ಷವು ತೀವ್ರವಾಗಿ ಖಂಡಿಸಿದೆ.

ಬೆಂಗಳೂರಿನ ಸಿವಿ ರಾಮನ್‌ ನಗರದಲ್ಲಿ ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್ ಎಂಬಾತ ರಸ್ತೆಯಲ್ಲೇ ಕ್ಷುಲ್ಲಕ ಕಾರಣಕ್ಕೆ ಕನ್ನಡಿಗ ಟೆಕ್ಕಿ ವಿನಯ್‌ ಕುಮಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಭಾಷಾ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರೇ, ಗೃಹ ಸಚಿವ ಡಾ.ಪರಮೇಶ್ವರ್ ಅವರೇ‌, ಸಾರ್ವಜನಿಕವಾಗಿ ಹೀಗೆ ರೌಡಿಯಂತೆ ಮಾರಣಾಂತಿಕವಾಗಿ ಹಲ್ಲೆ ಮಾಡಿರೋ ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್ ನನ್ನು ಶೀಘ್ರವೇ ಬಂಧಿಸಿ ಎಂದು ಎಕ್ಸ್ ನಲ್ಲಿ ಒತ್ತಾಯಿಸಿದೆ.

“>

 

ಕನ್ನಡಿಗರಿಗೆ ನ್ಯಾಯ ಕೊಡಿಸಿ. ಕರ್ನಾಟಕದ ಅನ್ನ ತಿಂದು, ನೀರು ಕುಡಿದು, ಉದ್ಯೋಗ ಪಡೆದು ಕನ್ನಡಿಗರ ಮೇಲೆ ಈ ರೀತಿ ದೌರ್ಜನ್ಯ ಎಸಗುವ, “ಉಂಡ ಮನೆಗೆ ದ್ರೋಹ” ಬಗೆಯುವ ನೀಚರಿಗೆ ಸರ್ಕಾರ ತಕ್ಕ ಪಾಠ ಕಲಿಸಬೇಕಿದೆ. ನಮ್ಮ ನೆಲದಲ್ಲೇ ದಿನವೂ ಕನ್ನಡಿಗರ ಮೇಲೆ ವಲಸಿಗರಿಂದ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ಪಕ್ಷ ಆಗ್ರಹಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ