ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷರ ವರ್ತನೆಯಿಂದ ಬೇಸತ್ತು ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಶಶಿಧರ್ ಬೇಲೂರು ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ನಿಷ್ಠಾವಂತ ಕಾರ್ಯಕರ್ತರಾದ ನಮ್ಮನ್ನು ಕಡೆಗಣಿಸಿದ್ದಾರೆ. ಈ ವಿಚಾರವನ್ನು ಪಕ್ಷದ ಜಿಲ್ಲಾಧ್ಯಕ್ಷ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಮನನೊಂದು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂಬರುವ ದಿನಗಳಲ್ಲಿ ತಮ್ಮ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಮಂಚೇಗೌಡ, ಉಮೇಶ್, ದಿನೇಶ್, ಶಿವರಾಮು, ಚನ್ನಪ್ಪ ಹಾಗೂ ನಿರಂಜನ್ ಉಪಸ್ಥಿತರಿದ್ದರು.




