ಮಳವಳ್ಳಿ ಶಾಂತಿ ಕಾಲೇಜು ಆವರಣದಲ್ಲಿ ಡಿ.08 ರಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ವತಿಯಿಂದ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಮೇಳ ನಡೆಯಲಿದೆ ಎಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಸಂಚಾಲಕ ಪ್ರಕಾಶ ತಳಗವಾದಿ ತಿಳಿಸಿದರು.
ಮಳವಳ್ಳಿ ಪಟ್ಟಣದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ನಿರುದ್ಯೋಗ ಯುವಕ ಯುವತಿಯರಿಗೆ ಅನುಕೂಲವಾಗಲೆಂದು ಸುಮಾರು 100 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳ ಬೇಕೆಂದು ತಿಳಿಸಿದರು.
ಗೋಷ್ಠಿಯಲ್ಲಿ ಶಿವರಾಜ್ ನಾಯಕ್, ಮಹದೇವ ಇದ್ದರು.




