Sunday, November 22, 2026

ಪ್ರಾಯೋಗಿಕ ಆವೃತ್ತಿ

ಕೂಲಿಕಾರರಿಗೆ ಸಂಕಷ್ಟ| ಉದ್ಯೋಗ ಖಾತ್ರಿ ಹಣ ನೀಡದ ಕೇಂದ್ರ ಸರ್ಕಾರ ; ಪುಟ್ಟಮಾದು

ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿಯಡಿ ಒಂದೂವರೆ ತಿಂಗಳಿಂದ ಕೂಲಿ ಕೆಲಸ ಮಾಡಿದ ಕೂಲಿಯ ಹಣವನ್ನು ಬಿಡುಗಡೆ ಮಾಡದೇ ಕೃಷಿ ಕೂಲಿಕಾರರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದ್ದು, ಕೂಡಲೇ ಬಾಕಿ ಕೂಲಿ ಹಣ ಬಿಡುಗಡೆ ಮಾಡಿ ತುರ್ತಾಗಿ ಕೆಲಸ ಕೊಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಆಗ್ರಹಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೂಲಿ ಹಣ ಬಿಡುಗಡೆ ಕೂಲಿಕಾರರನ್ನು ಸಾಲದ ಕೂಪಕ್ಕೆ ದೂಡಿದೆ. ಇದು ಕೇಂದ್ರ ಸರ್ಕಾರ ಕೂಲಿಕಾರರ ಪರವಲ್ಲ ಎಂಬ ನಿಲುವನ್ನು ತೋರುತ್ತದೆ ಎಂದು ದೂಡಿದರು.

ಮಂಡ್ಯ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ತಾವು ಅಧಿಕಾರ ವಹಿಸಿಕೊಂಡಾಗಿನಿಂದ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲು ನೆಪವೊಡ್ಡಿ ಕೂಲಿಕಾರರನ್ನು ಕಡೆಡಗಣಿಸುತ್ತಿದ್ದು, 100 ದಿನಗಳ ಕೆಲಸಕ್ಕೆ ಅಘಾತವನ್ನುಂಟು ಮಾಡಿದ್ದಾರೆ. ಕೂಡಲೇ ಕೆಲಸ ಕೊಡಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಪೋರೇಟ್ ಕಂಪನಿಗಳ ಓಲೈಕೆ

ಕೇಂದ್ರ ಸರ್ಕಾರ ಕೂಲಿಕಾರರನ್ನು ಸಂಪೂರ್ಣ ಕಡೆಗಣಿಸಿದ್ದು, ಕಾರ್ಪೋರೇಟ್ ಕಂಪನಿಗಳ ಓಲೈಕೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಗದೇ ಬಡ ಕೂಲಿಕಾರರ ವಸತಿ ನಿರ್ಮಾಣಕ್ಕೆ ಕನಿಷ್ಠ 6 ಲಕ್ಷ ರೂ ನೀಡಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಬಿಪಿಎಲ್ ಕುಟುಂಬಗಳಿಗೆ ಅನಿಷ್ಠ 100 ಯೂನಿಟ್ ವಿದ್ಯುತ್‌ ಅನ್ನು ಬಜೆಟ್‌ನಲ್ಲಿ ಘೋಷಿಸಬೇಕು, ಕನಿಷ್ಠ ಕೂಲಿ 468 ರೂ.ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಮಾರ್ಚ್8ರಂದು ಉಡುಪಿ, ಕೊಡಗು, ಮೈಸೂರು ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಪ್ರಮುಖ ಕಾರ್ಯಕರ್ತರ ಸಂಘಟನಾ ಸಮಾವೇಶವನ್ನು ನಗರದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದು, ಕೃಷಿ ಕೂಲಿಕಾರರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಬಿ.ವೆಂಕಟ್, ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೆರಾ, ಹಿರಿಯ ಉಪಾಧ್ಯಕ್ಷ ಜಿ.ಎನ್.ನಾಗರಾಜು, ಮುನಿವೆಂಕಟಪ್ಪ, ರಾಜ್ಯ ಕಾರ್ಯದರ್ಶಿ ಬಿ.ಎಂ.ಶಿವಮಲ್ಲಯ್ಯ, ಬಿ.ಹನುಮೇಶ್, ಸರೋಜಮ್ಮ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಜಿ.ಪ್ರಧಾನಕಾರ್ಯದರ್ಶಿ ಬಿ.ಹನುಮೇಶ್, ಮಂಡ್ಯ ತಾಲೂಕು ಅಧ್ಯಕ್ಷ ಅಮಾಸಯ್ಯ, ಮದ್ದೂರು ತಾ. ಕಾರ್ಯದರ್ಶಿ ಟಿ.ಪಿ.ಅರುಣ್‌ಕುಮಾರ್, ಮಂಡ್ಯ ತಾ.ಕಾರ್ಯದರ್ಶಿ ಆರ್.ರಾಜು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ