Saturday, May 18, 2024

ಪ್ರಾಯೋಗಿಕ ಆವೃತ್ತಿ

ಉದ್ಯೋಗ ಮಾಹಿತಿ| 3484 ಸಶಸ್ತ್ರ ಪೋಲೀಸ್ ಕಾನ್ಸ್‌ಟೇಬಲ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ನ ಒಟ್ಟು 3484 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಲಾಗಿದೆ.

ಈ ಹುದ್ದೆಗಳಿಗೆ 2022 ಸೆಪ್ಟೆಂಬರ್ 19 ರಿಂದ 2022 ಅಕ್ಟೋಬರ್ 31ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದನ್ನು ನವಂಬರ್ 30-2022 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕೆಎಸ್ ಪಿ ಅಧಿಕೃತ ವೆಬ್ಸೈಟ್ https://ksp-recruitment.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಉಳಿಕೆ ಮೂಲ ವೃಂದದ ಶಸಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು- 3064
ಕಲ್ಯಾಣ ಕರ್ನಾಟಕ ವೃಂದದ ಶಸಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು- 420
ಒಟ್ಟು ಉದ್ದಗಳು- 3484

ಅರ್ಜಿ ಶುಲ್ಕ ವಿವರ
ಸಾಮಾನ್ಯ ಅರ್ಹತೆ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹400/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ₹200/- ಇರಲಿದೆ.
ಶುಲ್ಕವನ್ನು ಆನ್ಲೈನ್ ಬ್ಯಾಂಕ್ ಶಾಖೆಗಳು ಹಂಚಿಕಛೇರಿ ಮೂಲಕ 2022 ಡಿಸೆಂಬರ್ 2ರ ಒಳಗೆ ಪಾವತಿಸಬೇಕು.

ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
ಮಾಸಿಕ ವೇತನ: 23500 -47650.
ವಯೋಮಿತಿ: ಕನಿಷ್ಠ 18 ವರ್ಷದಿಂದ ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ ವಿದ್ಯಾರ್ಥಿಗಳಿಗೆ 27 ವರ್ಷ. ಇತರೆ ಅಭ್ಯರ್ಥಿಗಳಿಗೆ 25 ವರ್ಷ. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸವಾಗಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ https://ksp-recruitment.in/ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!