ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ನ.24ರಂದು ಬಿಜೆಪಿ ಪಕ್ಷ ಸೇರ್ಪಡೆ ಹಾಗೂ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡ ಎಸ್ ಸಚ್ಚಿದಾನಂದ ಇಂಡುವಾಳು ತಿಳಿಸಿದ್ದಾರೆ.
ತಗ್ಗಹಳ್ಳಿ ಗ್ರಾಮದ ಶ್ರೀಕಾಳಮ್ಮ ದೇವಾಲಯ ಆವರಣದಲ್ಲಿ ನಡೆಯಲಿರುವ ಸಮಾರಂಭವು ಬೆಳಿಗ್ಗೆ 10.30 ಗಂಟೆಗೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಮಂದಿ ನಾನಾ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಇವರೆಲ್ಲರೂ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ .ಅಶೋಕ, ವಿಧಾನ ಪರಿಷತ್ ಪ್ರತಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ, ಮೈಸೂರು- ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಮಾಜಿ ಸಚಿವರಾದ ಬೈರತಿ ಬಸವರಾಜು, ಕೆ.ಸಿ.ನಾರಾಯಣಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್, ಬಿಜೆಪಿ ಮುಖಂಡ ಕೆ.ಎಸ್. ನಂಜುಂಡೇಗೌಡ, ಡಾ. ಸಿದ್ದರಾಮಯ್ಯ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ, ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಎಲ್.ಲಿಂಗರಾಜು, ಮನಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಜೆ.ಅಶೋಕ್ ಜಯರಾಮ್, ಮಳವಳ್ಳಿ ಮುನಿರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಳಾಪುರ ಶ್ರೀಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಂಗಳ, ತಾಲೂಕು ಬಿಜೆಪಿ ಅಧ್ಯಕ್ಷ ಪೀಹಳ್ಳಿ ರಮೇಶ್, ಪಕ್ಷದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ಆಗಮಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.




