ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ ಹಾಗೂ ಕನ್ನಂಬಾಡಿ ದಿನಪತ್ರಿಕೆ ಸಹಯೋಗದಲ್ಲಿ ಜೂ.4ರಂದು ಬೆಳಿಗ್ಗೆ 10.30ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಹಾಗೂ ಡಾ. ಪುನೀತ್ ರಾಜಕುಮಾರ್ ಸ್ಮರಣಾರ್ಥ 28 ನೇ ರಾಜ್ಯ ಮಟ್ಟದ ಕವಿ ಕಾವ್ಯ ಮೇಳ ನಡೆಸಲಾಗುವುದು ಎಂದು ಪತ್ರಕರ್ತ ಎಸ್.ಕೃಷ್ಣಸ್ವರ್ಣಸಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ನೇಗಿಲ ಧರ್ಮ ಚಿತ್ರದ ಧ್ವನಿಸುರುಳಿ ಮತ್ತು ಟೀಸರ್ ಬಿಡುಗಡೆ ಹಾಗೂ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ವಾಣಿವಿಲಾಸ ಮತ್ತು ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಯುವ ಸೇನೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ ಸುಧಾಕರ್ ಹೊಸಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದು,ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.
ಚಲನಚಿತ್ರ ನಿರ್ದೇಶಕ ಮಹೇಶ್ ಸುಖಧರೆ ನೇಗಿಲ ಧರ್ಮ ಚಿತ್ರದ ಧ್ವನಿಸುರಳಿ ಮತ್ತು ಟೀಸರ್ ಬಿಡುಗಡೆ ಮಾಡಲಿದ್ದು, ಪತ್ರಕರ್ತ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸಂಘದ ಉಪಾಧ್ಯಕ್ಷ ಮುದ್ದೇಗೌಡ ನಾಲ್ವಡಿ ಕುರಿತು ಮಾತನಾಡಲಿದ್ದು, ಶಾಸಕ ಸಿ. ಎಸ್. ಪುಟ್ಟರಾಜು ಎಚ್. ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎಂ ಶ್ರೀನಿವಾಸ್ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಿದ್ದು,ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ರಾಜಮಾತೆ ವಾಣಿವಿಲಾಸ ಪ್ರಶಸ್ತಿ ಪ್ರದಾನ ಮಾಡುವರು ಎಂದರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು. ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್, ಮತ್ತೀಕೆರೆ ಜಯರಾಮ್, ಕೃಷ್ಣಪ್ರಸಾದ್, ಬಿ. ಪಿ. ಪ್ರಕಾಶ್, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಗೋಷ್ಟಿಯಲ್ಲಿ ನಾಯಕನಟ ಮದನ್ ಗೌಡ, ಸಹಾಯಕ ನಿರ್ದೇಶಕ ಸೂರ್ಯ ಉಪಸ್ಥಿತರಿದ್ದರು.