ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಂಡ್ಯ ಜಿಲ್ಲಾ ಶಾಖೆಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2005 – 28ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧಿಕಾರ ಸ್ವೀಕಾರ ಸಮಾರಂಭವನ್ನು ನ.16ರ ಸಂಜೆ 6ಗಂಟೆಗೆ ಮಂಡ್ಯ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಮ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ಅವಧಿಯಿಂದ ನಮ್ಮ ತಂಡ ಅಧಿಕಾರ ಪಡೆಯಲು ಯಶಸ್ವಿಯಾಗಿದ್ದು, ಸಂಘದಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದೇವೆ ಎಂದರು.
ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಾಸಾನಿಧ್ಯದ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮತ್ತೀಕೆರೆ ಜಯರಾಮ್ ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಪಿ.ರವಿಕುಮಾರ್ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ಸಿ.ಲೋಕೇಶ್, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಭಾಗವಹಿಸುವರು ಎಂದು ಹೇಳಿದರು.
ಇದೇ ವೇಳೆ ಸಂಘದ ಮಾಜಿ ಅಧ್ಯಕ್ಷರಾದ ಪಿ.ಜೆ.ಚೈತನ್ಯ ಕುಮಾರ್, ಕೆ.ಎನ್.ರವಿ, ಬಿ.ಪಿ. ಪ್ರಕಾಶ್, ಹಿರಿಯ ಪತ್ರಕರ್ತರಾದ ಎ.ಎಲ್.ಬಸವೇಗೌಡ, ಚುನಾವಣಾಧಿಕಾರಿ ಶಿವಾನಂಜಯ್ಯ (ನಂಜಪ್ಪ), ನಿರ್ಗಮಿತ ಅಧ್ಯಕ್ಷ ಕೆ.ಎನ್.ನವೀನ್ ಕುಮಾರ್, ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಆನಂದ್ ಅವರನ್ನು ಮಿತ್ರ ಫೌಂಡೇಶನ್ ನಾ ಅಧ್ಯಕ್ಷ ಬೂಕನಕೆರೆ ವಿಜಯ್ ರಾಮೇಗೌಡ, ಮನ್ ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ (ಉಮ್ಮಡಳ್ಳಿ ಶಿವಪ್ಪ) ಸನ್ಮಾನಿಸುವರು ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಹಾಲಿ ಅಧ್ಯಕ್ಷ ಕೆ.ಎನ್.ನವೀನ್ ಕುಮಾರ್, ಹಾಲಿ ಪ್ರಧಾನ ಕಾರ್ಯದರ್ಶಿ ಆನಂದ್, ಚುನಾಯಿತ ಪ್ರಧಾನ ಕಾರ್ಯದರ್ಶಿ ಶಶಿಧರ ಕಾಡುಕೊತನಹಳ್ಳ, ಚುನಾಯಿತ ಕಾರ್ಯದರ್ಶಿ ಲೋಕೇಶ್, ಖಜಾಂಚಿ ನಂಜುಂಡಸ್ವಾಮಿ ಉಪಸ್ಥಿತರಿದ್ದರು.




