Thursday, November 19, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union Of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿದೆ.

ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಟೆಲೆಕ್ಸ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿ

ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟ
ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟ
ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ
ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಅ.28 ನಾಮಪತ್ರಗಳ ಪರಿಶೀಲನೆ
ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನ

ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ )ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು -09 ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೆಯುಡಬ್ಲ್ಯೂಜೆಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಟೆಲೆಕ್ಸ್ ಮಾಹಿತಿ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ