Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಜೂನ್ 18ರಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ, ಪ್ರಜ್ವಲ್ ರೇವಣ್ಣ ಅವರನ್ನು ಮಂಗಳವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದೊಯ್ದಿದ್ದಾರೆ.

ವಿಚಾರಣೆ ವೇಳೆ, ನ್ಯಾಯಲಯಕ್ಕೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಅಧಿಕಾರಿಗಳು ನನ್ನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ತಿಳಿಸಿದರು.

ಆಗ ನ್ಯಾಯಾಧೀಶರು ವೈದ್ಯಕೀಯ ಪರೀಕ್ಷೆಯನ್ನು ಏಕೆ ನಡೆಸಲಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಶ್ನಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯವು ಮೇ 31 ರಂದು ಪ್ರಜ್ವಲ್ ರನ್ನು ಜೂನ್ 6 ರವರೆಗೆ ಎಸ್‌ಐಟಿ ವಶಕ್ಕೆ ನೀಡಿತು ಮತ್ತು ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!