Monday, May 20, 2024

ಪ್ರಾಯೋಗಿಕ ಆವೃತ್ತಿ

ಪ್ರಜ್ವಲ್ ಲೈಂಗಿಕ ಹಗರಣ | ಮೇ 14ರವರೆಗೆ ಹೆಚ್.ಡಿ ರೇವಣ್ಣಗೆ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌ ಡಿ ರೇವಣ್ಣರಿಗೆ ನ್ಯಾಯಾಲಯವು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಕಸ್ಟಡಿಗೆ ಮೇ 8ರವರೆಗೆ ನೀಡಲಾಗಿತ್ತು. ಇಂದು ಮತ್ತೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಿದಾಗ, “ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ, ಅವರನ್ನು ಎಸ್‌ಐಟಿ ವಶಕ್ಕೆ ನೀಡಬೇಕು” ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಕೋರಿದರು. ಇದಕ್ಕೆ ಒಪ್ಪದ ಪೀಠವು ರೇವಣ್ಣರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದರು. ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಈ ಮಧ್ಯೆ ಎಚ್‌.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ನ್ಯಾಯಾಲಯದಲ್ಲಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಮಹತ್ವದ ಆದೇಶ ನೀಡಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!