Wednesday, November 18, 2026

ಪ್ರಾಯೋಗಿಕ ಆವೃತ್ತಿ

ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಅಧಿಕಾರಿಗೆ 14 ದಿನ ನ್ಯಾಯಾಂಗ ಬಂಧನ

₹ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಳವಳ್ಳಿ ಪುರಸಭೆಯ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಅವರಿಗೆ 14 ದಿನ ನ್ಯಾಯಾಂಗ ವಿಧಿಸಿ ನಗರದ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಲಯ ತೀರ್ಪು ನೀಡಿದೆ.

ಮಂಗಳವಾರ ರಾತ್ರಿ ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ಲಂಚ ಪಡೆಯುವಾಗ ನಾಗೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು.  1 ಲಕ್ಷದ 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ನಾಗೇಂದ್ರ
40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರು ವಿಕಲಚೇತನರಿಗೆ ನೀಡಿದ್ದ ವಾಹನಗಳನ್ನು ವಿತರಿಸಿದ್ದರು. ಇದರ ಬಾಕಿ ಹಣ ಬಿಡುಗಡೆಗೆ ನಾಗೇಂದ್ರ 1.20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶಿವರಾಜ್ ಹೊಳ್ಳಾಲ್ ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಡಿವೈಎಸ್ಪಿ ಸುನೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದಾಗ ನ್ಯಾಯಧೀಶರಾದ ಬಿ.ಜೆ.ರಮಾ ನ್ಯಾಯಂಗ‌‌ ಬಂಧನಕ್ಕೆ ಒಪ್ಪಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ