Saturday, July 13, 2024

ಪ್ರಾಯೋಗಿಕ ಆವೃತ್ತಿ

ಜೂನ್ 04 ರಂದು ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ

ಕರ್ನಾಟಕ ಲೋಕಾಯುಕ್ತ ಇಲಾಖೆಯ ಉಪಲೋಕಯುಕ್ತರಾದ ನ್ಯಾಯಮೂರ್ತಿ ಕೆ.ಎನ್ ಪಣೀಂದ್ರ ರವರು ಜೂನ್ 04 ರಂದು ಬೆಳಿಗ್ಗೆ 11;30 ರಿಂದ ಮಧ್ಯಾಹ್ನ 1:30 ರವರೆಗೆ ಹಾಗೂ ಮ. 2:30 ರಿಂದ ಸಂಜೆ 3:30 ರವರೆಗೆ ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸ ವಿಳಂಬವಾಗಿದ್ದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೇ, ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.

ಜೂನ್ 06 ರಂದು ಬೆ. 10 ಗಂಟೆಯಿಂದ ಮದ್ಯಾಹ್ನ 1:30 ರವರೆಗೆ ಮಂಡ್ಯ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ( ಉಪ ಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ.

ದೂರುದಾರರು ನಿಗಧಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಇಲಾಖೆ ಮಂಡ್ಯ ವಿಭಾಗದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!