Friday, September 20, 2024

ಪ್ರಾಯೋಗಿಕ ಆವೃತ್ತಿ

ಜೂನ್ 25 ರಂದು ಕರ್ನಾಟಕ ಜನಶಕ್ತಿ ಜಿಲ್ಲಾ ಸಮ್ಮೇಳನ

ರಾಜ್ಯದ ಜನಪರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಜನಶಕ್ತಿ ಸಂಘಟನೆ ಒಂದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಜಿಲ್ಲಾ ಸಮ್ಮೇಳನ ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯ ಸಮಿತಿ ಸದಸ್ಯ ಸಿದ್ದರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಜನಶಕ್ತಿ ಸಂಘಟನೆಯ 2011ರಲ್ಲಿ ಮೊಟ್ಟಮೊದಲ ಸರ್ವ ಸದಸ್ಯರ ಸಭೆಯೊಂದಿಗೆ ಕರ್ನಾಟಕದಲ್ಲಿ ಸಂಘಟನೆ ಕಾರ್ಯಾರಂಭ ಮಾಡಿದ್ದು ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣದಿಂದ.ಮಂಡ್ಯದಲ್ಲಿ ಪ್ರಾರಂಭವಾದ ಸಂಘಟನೆ ಒಂದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಸಮ್ಮೇಳನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಂಡ್ಯದಲ್ಲಿ ಆರಂಭವಾದ ಸಂಘಟನೆ ಇಂದು ರಾಜ್ಯಾದ್ಯಂತ ಬೇರೆ ಬೇರೆ ಜಿಲ್ಲೆಗಳಿಗೂ ವಿಸ್ತರಿಸಿದೆ. ರೈತರು, ಶ್ರಮಿಕರು (ಸ್ಲಂ ಜನರು) ಅಸಂಘಟಿತ ಕಾರ್ಮಿಕರು, ಭೂಮಿ ಹಕ್ಕು ವಂಚಿತರು ಸೇರಿದಂತೆ ಹಲವು ಶೋಷಿತ ಸಮುದಾಯಗಳ ಪರವಾಗಿ ಹೋರಾಟ ರೂಪಿಸಿಕೊಂಡು ಬಂದಿದೆ. ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಪರವಾಗಿ ಹಲವು ಹೋರಾಟಗಳನ್ನು ಮಾಡಿದೆ. ಈಗ ಜನಶಕ್ತಿಗೆ ಒಂದು ದಶಕ ತುಂಬಿರುವ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮ್ಮೇಳನ ಮಾಡುತ್ತಿದ್ದೇವೆ ಎಂದರು.

ಕರ್ನಾಟಕ ಜನಶಕ್ತಿಯ ಮುಂದಿನ ಹೋರಾಟ ಹೇಗಿರಬೇಕು, ಆಗಿರುವ ತಪ್ಪುಗಳ ಬಗ್ಗೆ ಸಮ್ಮೇಳನದಲ್ಲಿ ಈ ನಾಡಿನ ಜನಪರ ಹೋರಾಟಗಾರರು, ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಚರ್ಚೆ ನಡೆಸಿ ಮುಂದಿನ ಹೋರಾಟಗಳ ರೂಪುರೇಷೆ ಸಿದ್ಧಪಡಿಸಿ ಗಟ್ಟಿಯಾದ ಚಳುವಳಿಯನ್ನು ಕಟ್ಟುವುದು ಸಮ್ಮೇಳನದ ಪ್ರಮುಖ ಉದ್ದೇಶ ಎಂದರು.

ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, ಕರ್ನಾಟಕ ರಾಜ್ಯದ ಸುಮಾರು 20 ಜಿಲ್ಲೆಗಳಲ್ಲಿ ಕರ್ನಾಟಕ ಜನಶಕ್ತಿ ಸಂಘಟನೆ ಬೆಳೆಯಲು ಎಲ್ಲಾ ಪ್ರಗತಿಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿರುವ ನಮ್ಮ ಸಂಘಟನೆ ಭಾಗವಾಗಿ ಕೆಲಸ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇವೆ.ಇದು ಮಂಡ್ಯ ಜನತೆಯ ಸಂಭ್ರಮದ ಸಮ್ಮೇಳನವಾಗಿದ್ದು ಎಲ್ಲರೂ ಭಾಗವಹಿಸಬೇಕೆಂದು ಕೋರಿದರು.

ಸಮ್ಮೇಳನವನ್ನು ಸಾಮಾಜಿಕ ಹೋರಾಟಗಾರ, ಚಿಂತಕ ಡಾ. ಎಚ್.ವಿ. ವಾಸು ಉದ್ಘಾಟಿಸಲಿದ್ದು, ಹಿರಿಯ ವಕೀಲರಾದ ವಿಶ್ವನಾಥ್ ಮುಖ್ಯ ಭಾಷಣ ಮಾಡಲಿದ್ದಾರೆ. ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಜನಶಕ್ತಿಯ ಪ್ರಣಾಳಿಕೆ ಮತ್ತು ರಾಜ್ಯ ವರದಿ ಮಂಡನೆ ಮಾಡಲಿದ್ದು, ಹಿರಿಯ ರೈತ ನಾಯಕಿ ಅನಸೂಯಮ್ಮ ಅರಳಾಳುಸಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಜನಶಕ್ತಿಯ ಮುಖಂಡರಾದ ಕೃಷ್ಣ ಪ್ರಕಾಶ್,ಕೃಷ್ಣಪ್ಪ,ಪ್ರಕಾಶ್ ಈಶ್ವರಿ, ಅಂಜಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!