Thursday, September 19, 2024

ಪ್ರಾಯೋಗಿಕ ಆವೃತ್ತಿ

ಜೂನ್.4 ರಂದು ಪುರುಷೋತ್ತಮಾನಂದ ನಾಥ ಸ್ವಾಮೀಜಿಗೆ ಅಭಿನಂದನೆ

ಆದಿಚುಂಚನಗಿರಿ ಮಠದ ಅಭಿವೃದ್ಧಿಗೆ ತಮ್ಮದೇ ಆದ ಕಾಣಿಕೆ ನೀಡಿರುವ ಶ್ರೀ ಪುರುಷೋತ್ತಮಾನಂದ ನಾಥ ಸ್ವಾಮೀಜಿ ಅವರಿಗೆ 75 ವಸಂತಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಜೂ.೪ ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯದ ಬಿಜಿಎಸ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರ ಸ್ವಾಮೀಜಿಯವರ ಜೊತೆ ಸೇರಿದ ಪುರುಷೋತ್ತಮಾನಂದ ಸ್ವಾಮೀಜಿಯವರು ಆದಿಚುಂಚನಗಿರಿ ಮಠವನ್ನು ಸಾಕಷ್ಟು ಅಭಿವೃದ್ಧಿ ಪಡಿಸಿದ್ದಾರೆ.ಬೆಳ್ಳೂರಿನಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ತಲೆಯೆತ್ತಲು ಪುರುಷೋತ್ತಮಾನಂದ ಸ್ವಾಮೀಜಿ ಅವರು ಬಹಳ ಶ್ರಮಿಸಿದ್ದಾರೆ.ರೈತರಿಂದ ಮೆಡಿಕಲ್,ಇಂಜಿನಿಯರಿಂಗ್ ಕಾಲೇಜಿಗೆ ಜಮೀನು ಕೊಡಿಸುವಲ್ಲಿ ಇವರ ಪಾತ್ರ ದೊಡ್ಡದಾಗಿತ್ತು ಎಂದು ತಿಳಿಸಿದರು.

ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದಲ್ಲಿ ಇಂದು ಶಿಶುವಿಹಾರದಿಂದ ಹಿಡಿದು ಕಾಲೇಜುವರೆಗೆ ಉತ್ತಮವಾದ ಶಿಕ್ಷಣ ವ್ಯವಸ್ಥೆ ಇದೆ. 3500 ಮಕ್ಕಳು ವಿಶ್ವಮಾನವ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದು ದೊಡ್ಡ ಸಾಧನೆ. ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ಸೇವೆಯನ್ನು ನೀಡುವ ಸ್ವಾಮೀಜಿಯವರ ಸೇವೆಯನ್ನು ಪರಿಗಣಿಸಿ ಮಠದ ಭಕ್ತರೆಲ್ಲ ಸೇರಿ ಶ್ರೀಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ಶ್ರೀ ನಿರ್ಮಲಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು.ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಕಾಯಕ ದೀಪ್ತಿ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಅಭಿನಂದಿತರನ್ನು ಸನ್ಮಾನಿಸುವರು. ವಿಧಾನಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅಭಿನಂದನಾ ನುಡಿಗಳನ್ನಾಡುವರು ಎಂದು ತಿಳಿಸಿದರು. ಶಾಸಕರಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಸುರೇಶ್ ಗೌಡ, ಮರಿತಿಬ್ಬೇಗೌಡ ಯತಿಗಳನ್ನು ಗೌರವಿಸುವವರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಕೈಲಾಸಾಶ್ರಮದ ಜಯೇಂದ್ರ ಪೂರಿ ಮಹಾಸ್ವಾಮೀಜಿ, ಐರಾಣಿ ಮಠದ ಬಸವರಾಜೇಂದ್ರ ಸ್ವಾಮೀಜಿ, ಶಿವಲಿಂಗಾನಂದ ಸ್ವಾಮೀಜಿ, ಮಧುಸೂದನ ನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಪ್ರಸನ್ನನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ ಸೇರಿದಂತೆ ಅನೇಕರು ಪಾಲ್ಗೊಳ್ಳುವರು ಎಂದರು.

ವಿಶೇಷ ಆಹ್ವಾನಿತರಾಗಿ ನಗರಸಭಾಧ್ಯಕ್ಷ ಮಂಜು, ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ಎ.ಶೇಖರ್, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಪುಟ್ಟರಾಜು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಸ್ವಾಗತ ಸಮಿತಿಯ ಅಧ್ಯಕ್ಷರಾದ ಶಾಸಕ ಎಂ. ಶ್ರೀನಿವಾಸ್ ಮಾತನಾಡಿ,ಮಂಡ್ಯ ಜಿಲ್ಲೆಗೆ ಪುರುಷೋತ್ತಮಾನಂದ ಸ್ವಾಮೀಜಿ ಅವರ ಸೇವೆ ಅಪಾರವಾಗಿದೆ. ಅದರಲ್ಲೂ ಮಂಡ್ಯ ತಾಲೂಕಿನಲ್ಲಿ ಅವರು ಮಾಡಿರುವ ಶೈಕ್ಷಣಿಕ ಸೇವೆ ಸಾಕಷ್ಟಿದೆ.ಸ್ವಾಮೀಜಿಗಳ ಈ ಸಾಧನೆಗಾಗಿ ಅಭಿನಂದನಾ ಸಮಾರಂಭ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಯಾಗುವಂತೆ ಮಾಡಬೇಕು ಎಂದರು.

ಗೋಷ್ಟಿಯಲ್ಲಿ ಸ್ವಾಗತ ಸಮಿತಿಯ ಸದಸ್ಯರಾದ ನಗರಸಭಾ ಅಧ್ಯಕ್ಷ ಎಚ್.ಎಸ್.ಮಂಜು ಮಾಜಿ ಅಧ್ಯಕ್ಷೆ ಕೆ.ಸಿ. ನಾಗಮ್ಮ, ಜಿ.ಪಂ. ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್,ಪೂಜಾ ಶಾಮಿಯಾನ ರಮೇಶ್, ಸಾಯಿ ಟ್ರಾಕ್ಟರ್ಸ್ ಮಾಲೀಕ ರವೀಂದ್ರ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!