Thursday, November 19, 2026

ಪ್ರಾಯೋಗಿಕ ಆವೃತ್ತಿ

ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ; ನ್ಯಾ.ದೇವರಾಜ್

ಮತದಾನ ಸಂವಿಧಾನದ ಮೂಲಭೂತ ಹಕ್ಕು ಮತದಾನ ತಾವೆಲ್ಲರೂ ಕಡ್ಡಾಯವಾಗಿ ಮತದಾರವನ್ನು ನಿರ್ಭೀತರಾಗಿ ಯಾವುದೇ ಅವಿಷ್ಯಕ್ಕೆ ಒತ್ತಡಕ್ಕೆ ಮಣಿಯದೆ ಮತದಾನ ಮಾಡಬೇಕೆಂದು, ಹೀಗೆ ಮಾಡುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ ಎಂದು ನ್ಯಾಯಮೂರ್ತಿ ದೇವರಾಜ್ ಹೆಚ್ ಆರ್ ತಿಳಿಸಿದರು.

ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ, ತಹಶೀಲ್ದಾರ್ ರವರ ಕಾರ್ಯಾಲಯ ಹಾಗೂ ಕಾನೂನು ಸೇವಾ ಪ್ರಾಧಿಕಾರ ರವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸಾತ್ಮಕ ಸಾಂಪ್ರದಾಯಗಳ ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಯಿಡಿಯುತ್ತೇವೆಂದು ಪ್ರಮಾಣ ಮಾಡಬೇಕೆಂದರು.

ತಹಶೀಲ್ದಾರ್ ಆರ್. ಅಶೋಕ್ ಮಾತನಾಡಿ, ಮತದಾನ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಮತದಾರರ ಗುರುತಿನ ಚೀಟಿ ಹೊಂದಿಲ್ಲದವರು ವೋಟರ್ ಪೋರ್ಟಲ್ ಅಪ್ಲಿಕೇಶನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮತದಾರರ ಗುರುತಿನ ಚೀಟಿ ಹೊಂದಿಲ್ಲದವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಇದೇ ವೇಳೆ ಮತಗಟ್ಟೆಯ ಚುನಾವಣೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಧೀರ್, ಅಪರ ಸಿವಿಲ್ ನ್ಯಾಯಾಧೀಶರಾದ  ಶಕುಂತಲಾ, ಕು.ಅರ್ಪಿತಾ, ಇಓ ಸುಷ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ