Sunday, May 19, 2024

ಪ್ರಾಯೋಗಿಕ ಆವೃತ್ತಿ

ಪರಿಸರ ಸ್ವಚ್ಚವಾಗಿಟ್ಟು ಆರೋಗ್ಯ ಕಾಪಾಡಿಕೊಳ್ಳಿ- ನ್ಯಾ.ಮಾದೇಶ್

ನಾವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವುದರ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಾದೇಶ್ ತಿಳಿಸಿದರು.

ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚ ಭಾರತ್‌ದಡಿಯಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಆರೋಗ್ಯ ಇಲಾಖೆ, ವಕೀಲರ ಸಂಘ, ಪುರಸಭೆ ವತಿಯಿಂದ ನಡೆದ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರವನ್ನು ಶುಚಿತ್ವದಿಂದ ಇಟ್ಟುಕೊಂಡರೇ ರೋಗವನ್ನು ನಿಯಂತ್ರಿಸಿ ಉತ್ತಮ ವಾತವರಣದಲ್ಲಿ ಬದುಕಬಹುದಾಗಿರುವುದರಿಂದ ಪ್ರತಿಯೊಬ್ಬರೂ ಸ್ವಚ್ಚತೆಗೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿದರು.

ಇತ್ತಿಚಿನ ದಿನಗಳಲ್ಲಿ ಹಲವು ರೋಗಗಳು ಕಂಡು ಬರುತ್ತಿರುವುದರಿಂದ ತಮ್ಮ ಮನೆಯ ಪರಿಸರದ ಜೊತೆಗೆ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ಈ ನಿಟ್ಟಿಲ್ಲಿ ವಕೀಲರ ಸಂಘ, ಆರೋಗ್ಯ ಇಲಾಖೆ ಮತ್ತು ಪುರಸಭೆ ಸಹಯೋಗದಲ್ಲಿ ಸುಪ್ರಿಂಕೊರ್ಟ್ ಹಾಗೂ ಸರ್ಕಾರದ ನಿರ್ದೇಶನದಂತೆ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ಸಂಧರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಚಿನ್ ಶಿವಪೂಜಿ, ಹೆಚ್ಚುವರಿ ನ್ಯಾಯಾದೀಶರಾದ ಕಾವ್ಯ.ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಟಿ ಹೆಚ್ ಓ ಡಾ.ವೀರಭದ್ರಪ್ಪ, ವಕೀಲರ ಸಂಘದ ಅಧ್ಯಕ್ಷ ಸುಂದರ್‌ರಾಜು ಸೇರಿದಂತೆ ಹಲವರು ಇದ್ದರು.s

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!