Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಬೆಟ್ಟಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಡಾಮಡಹಳ್ಳಿ ರವಿ ಆಯ್ಕೆ

ಪಾಂಡವಪುರ ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಡಾಮಡಹಳ್ಳಿ ರವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಕೆ.ಬೆಟ್ಟಹಳ್ಳಿ‌ ಮನು ಅವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆದಿತ್ತು. ನೂತನ ಅಧ್ಯಕ್ಷ ಡಾಮಡಹಳ್ಳಿ ರವಿ ಅವರಿಗೆ ಬೆಂಬಲಿಗರು, ನಿರ್ದೇಶಕರು ಅಭಿನಂದಿಸಿ, ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ಯಾದನಹಳ್ಳಿ ಚಲುವರಾಜು, ಗುರುಸ್ವಾಮಿ ಸೇರಿದಂತೆ ಸಂಘದ ನಿರ್ದೇಶಕರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!