Saturday, July 13, 2024

ಪ್ರಾಯೋಗಿಕ ಆವೃತ್ತಿ

ಕೆ.ಕೆ.ರಾಧಾಕೃಷ್ಣ ಅಭಿಮಾನಿ ಬಳಗದಿಂದ ನೋಟ್ ಬುಕ್ ವಿತರಣೆ

ಕೆ.ಕೆ.ರಾಧಾಕೃಷ್ಣ ಅಭಿಮಾನಿ ಬಳಗದ ಕಚೇರಿ ಉದ್ಘಾಟನೆ, ಬಸರಾಳು ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ವಿತರಣೆ ಸಮಾರಂಭ ಜು.2ರಂದು ಬೆಳಗ್ಗೆ 11 ಗಂಟೆಗೆ ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮದ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಆರ್. ಕೃಷ್ಣೇಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಆಟೋ ಸಂಘದವರಿಗೆ ಸಮವಸ್ತ್ರ ವಿತರಣೆ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ. ಜವರೇಗೌಡ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಚೇರಿಯನ್ನು ಸಮಾಜ ಸೇವಕ ಕೆ.ಕೆ.ರಾಧಾಕೃಷ್ಣ ಉದ್ಘಾಟಿಸಲಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ಬಸರಾಳು ಕೆಪಿಎಸ್‌ಸಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಅಪ್ಪಾಜಿ, ಕಂಬದಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ನಗರಸಭೆ ಮಾಜಿ ಸದಸ್ಯ ಬೋರೇಗೌಡ, ಆಟೋನಾಗರಾಜು, ಬಸರಾಳು ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಟಿ.ಶಂಕರೇಗೌಡ, ನಗರಸಭೆ ಸದಸ್ಯೆ ಸೌಭಾಗ್ಯ, ಜಿಲ್ಲಾ ಕುರುಬರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಎನ್.ದೊಡ್ಡಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ರಾಧಾಕೃಷ್ಣ ಅವರ ಅಭಿಮಾನಿ ಬಳಗದಿಂದ ಈ ಕಾರ್ಯಕ್ರಮ ಮಾಡುತ್ತಿದ್ದು,ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.ರಾಧಾಕೃಷ್ಣ ಅವರು ಕಳೆದ ಏಳು ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು,ಅವರು ಯಾವ ಪಕ್ಷದ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಾರೋ ಅವರ ಜೊತೆಗೆ ನಾವು ಇರುತ್ತೇವೆ ಎಂದು ಕೆ.ಕೆ.ರಾಧಾಕೃಷ್ಣ ಅಭಿಮಾನಿ ಸಂಘದ ಮಂಡ್ಯ ತಾಲ್ಲೂಕು ಅಧ್ಯಕ್ಷ ಸಂತೋಷ್ ತಿಳಿಸಿದರು.

ಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ಬೋರೇಗೌಡ, ಕೆ.ಕೆ.ಆರ್. ಸಂಘದ ಕೆರಗೋಡು ವಿರೂಪಾಕ್ಷ, ಕೃಷ್ಣ, ಪ್ರವೀಣ್, ರಾಜಶೇಖರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!