Friday, October 18, 2024

ಪ್ರಾಯೋಗಿಕ ಆವೃತ್ತಿ

ಮೈಸೂರು| ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ಬುಧವಾರ ರಾಜೀನಾಮೆ ಸಲ್ಲಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ರಾಜೀನಾಮೆ ನೀಡಿದ ನಂತರ ಮಾತನಾಡಿದ ಮರೀಗೌಡ, ನಾನು 40 ವರ್ಷಗಳಿಂದ ಸಿದ್ದರಾಮಯ್ಯ ಅವರ ಜೊತೆ ಇದ್ದೇನೆ.ನನಗೆ ಎರಡು ಬಾರಿ ಸ್ಟ್ರೋಕ್ ಆಗಿತ್ತು.ಆರೋಗ್ಯ ಸರಿ ಇಲ್ಲದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ಸೈಟ್ ನೀಡಿದ ಪ್ರಕರಣ ಹೊರ ಬರಲು ಮರೀಗೌಡ ಅವರೇ ಕಾರಣ ಎಂದು ಸಿಎಂ ಬೆಂಬಲಿಗರು ಆರೋಪಿಸಿದ್ದರು. ಮುಡಾ ಅಕ್ರಮ ಆರೋಪದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಕೆ.ಮರೀಗೌಡ ಅವರಿಗೆ ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ನೀಡಿದ್ದರು.

ಮುಡಾಗೆ ಹೊಸ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ತಂದ ಹಿನ್ನೆಲೆಯಲ್ಲಿ ಮುಡಾಗೆ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!