Sunday, November 22, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ : ಬೈಕ್ ಗಳ ಮುಖಾಮುಖಿ ಡಿಕ್ಕಿ : ಓರ್ವ ಸಾವು

ಕೆ.ಆ‌ರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕುಗಳ ನಡುವೆ ನಡೆದ ಬೈಕ್‌ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ಬುಧವಾರ ಮಧ್ಯಾಹ್ನ ಸುಮಾರು 1ಗಂಟೆ ಸಮಯದಲ್ಲಿ ನಡೆದಿದೆ.

ಕೆ. ಆರ್. ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು ಸ್ಥಳದಲ್ಲಿಯೇ ಮೃಪಟ್ಟಿದ್ದಾರೆ.

ಮತ್ತೊಂದು ಬೈಕಿನ ಸವಾರ ದೊಡ್ಡಯಾಚೇನಹಳ್ಳಿ ಗ್ರಾಮದ ಟೈಲರ್ ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ