Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಶೇ.100 ರಷ್ಟು ನ್ಯಾಯ ಒದಗಿಸುತ್ತೇನೆ – ಕೆ.ಆರ್.ಪೇಟೆ ಬಿ.ನಾಗೇಂದ್ರ

ನನ್ನ ಅಧಿಕಾರದ ಅವಧಿಯಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಶೇ.100ರಷ್ಟು ನ್ಯಾಯ ಒದಗಿಸುವ ಕೆಲಸ ಮಾಡುವ ಮೂಲಕ‌ ಕಾಂಗ್ರೆಸ್ ನಾಯಕರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕೆ.ಆರ್.ಪೇಟೆ ಬಿ.ನಾಗೇಂದ್ರ ಹೇಳಿದರು.

ಪಾಂಡವಪುರ ಪಟ್ಟಣದ ಐದು ದೀಪದ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪಾಂಡವಪುರದಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಅಭಿನಂದಿಸುವ ಮೂಲಕ ನನಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಳ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವೆ ಎಂದರು.

ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ನಿಷ್ಠೆಗಿಂತಲೂ ಪಕ್ಷ ನಿಷ್ಠೆಗೆ ನ್ಯಾಯ ಸಿಗಲಿದೆ ಎನ್ನುವುದಕ್ಕೆ ಬಿ.ನಾಗೇಂದ್ರ ಅವರೇ ಸೂಕ್ತ ಉದಾಹರಣೆ. ನಾಗೇಂದ್ರ ಅವರು ಜಿ..ಪಂ ಸದಸ್ಯರಾಗಿ, ಕೆ.ಆರ್‌.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದರ ಫಲವಾಗಿ ಅವರಿಗೆ ಇದೀಗ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿದೆ ಎಂದರು.

ಅಧಿಕಾರದ ಅವಧಿಯಲ್ಲಿ ನಾಗೇಂದ್ರ ಪಕ್ಷ ಸಂಘಟನೆ ಮಾಡುವ ಜತೆಗೆ, ಕಾರ್ಯಕರ್ತರಿಗೆ ಸ್ಪಂದಿಸುವ ಮೂಲಕ ನಿಗಮದ ಅಭಿವೃದ್ಧಿಗೆ ದುಡಿಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಟೌನ್ ಅಧ್ಯಕ್ಷ ಕೆ.ಉಮಾಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಹುಚ್ಚೇಗೌಡ, ಸದಸ್ಯರಾದ ಜಯಲಕ್ಷ್ಮಮ್ಮ, ಮಹ್ಮದ್ ಹನೀಫ್ (ಪಾಪು), ಟಿಎಪಿಸಿಎಂಎಸ್ ನಿರ್ದೇಶಕ ಟಿ.ಎಸ್.ಹಾಳಯ್ಯ, ಎಸ್.ಸಿ, ಎಸ್.ಟಿ ವಿಭಾಗದ ಅಧ್ಯಕ್ಷ ಕೆ.ಬಿ.ರಾಮು, ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ಜಿಲ್ಲಾ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ, ಮುಖಂಡರಾದ ಚಿಕ್ಕಾಡೆ ಮಹೇಶ್, ಪೊಲೀಸ್ ಸತ್ಯಪ್ಪ, ಚಿಕ್ಕಮರಳಿ ಧರ್ಮಣ್ಣ, ಬಿ.ಜೆ.ಸ್ವಾಮಿ, ಅಂತನಹಳ್ಳಿ ಪ್ರವೀಣ್, ಎ.ಜಿ.ಬಸವರಾಜು, ಹರಳಹಳ್ಳಿ ರಾಜೇಶ್ (ಲೋಕೇಶ್), ಎಸ್.ಟಿ.ದೊಡ್ಡವೆಂಕಟಯ್ಯ, ಸಿ.ಎಸ್.ದರ್ಶನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ