ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ರೈತನಾಯಕ ಕೆ.ಎಸ್. ಪುಟ್ಟಣ್ಣಯ್ಯನವರ ಸ್ಮರಣಾರ್ಥ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ 1.15 ಕೋಟಿ ಹಾಗೂ ಮಳವಳ್ಳಿಯ ಕನಕದಾಸ ಕ್ರೀಡಾಂಗಣ ಅಭಿವೃದ್ಧಿಗೆ 1 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ರೇಷ್ಮೆ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೊಳಿಸಬೇಕು ಎಂಬುದು ನನ್ನ ಗುರಿ. ಅದಕ್ಕಾಗಿ ಈಗಾಗಲೇ ಮಂಡ್ಯಕ್ಕೆ 10 ಕೋಟಿ, ಕೆ.ಆರ್.ಪೇಟೆಗೆ 14 ಕೋಟಿ, ಶ್ರೀರಂಗಪಟ್ಟಣಕ್ಕೆ 50 ಲಕ್ಷ ಅನುದಾನ ನೀಡಲಾಗಿದೆ. ಇದೀಗ. 1.15 ಕೋಟಿ ಅನುದಾನದಿಂದ ಪುಟ್ಟಣ್ಣಯ್ಯನವರ ಹೆಸರಿನಲ್ಲಿ ಕ್ರೀಡಾ ಸಮುಚ್ಛಯ ಹಾಗೂ ಮಳವಳ್ಳಿಯ ಕನಕದಾಸ ಕ್ರೀಡಾಂಗಣದಲ್ಲಿ1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.
ಅಭಿವೃದ್ಧಿಯೇ ನಮ್ಮ ಸರ್ಕಾರದ ಅಜೆಂಡವಾಗಿದ್ದು, ಜಿಲ್ಲೆಯ ಎಲ್ಲಾ ಕ್ರೀಡಾಂಗಣಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.