Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ. ಶೆಟ್ಟಹಳ್ಳಿ ಗ್ರಾಮದಲ್ಲಿ ಬೀದಿ ನಾಟಕದ ಮೂಲಕ ಆರೋಗ್ಯ ಜಾಗೃತಿ

ಆರೋಗ್ಯ ಇಲಾಖೆ ಸೂಚಿಸಿರುವ ಮುಂಜಾಗ್ರತ ಕ್ರಮಗಳನ್ನು ಸಾರ್ವಜನಿಕರು ಕಟ್ಟು ನಿಟ್ಟಾಗಿ ಪಾಲಿಸುವುದರಿಂದ ರೋಗಗಳನ್ನು ತಡೆಗಟ್ಟಬಹುದೆಂದು ಮೈಸೂರ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಹೇಳಿದರು.

ಅವರು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಶೆಟ್ಟಹಳ್ಳಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆ ಶೆಟ್ಟಹಳ್ಳಿ ಗ್ರಾಮದ ಕಾವೇರಿ ಬಡಾವಣೆಯ ಬೀದಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಕೆ ಶೆಟ್ಟಹಳ್ಳಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಹಾಗೂ ಯೋಜನೆಗಳ ಕುರಿತು”ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವ ಉದ್ದೇಶದಿಂದ ಇಂತಹ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.

ನಂತರ ಆಲದಹಳ್ಳಿ ಅರುಣೋದಯ ಕಲಾ ತಂಡದವರಿಂದ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ಮುನ್ನೆಚ್ಚರಿಕೆ ಕ್ರಮಗಳು ಸೇರಿದಂತೆ ಮುಂತಾದ ಆರೋಗ್ಯ ಕಾರ್ಯಕ್ರಮಗಳ ಹಾಗೂ ಯೋಜನೆಗಳ ಕುರಿತು ಬೀದಿ ನಾಟಕ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಈ ವೇಳೆ ಗ್ರಾಮ ಪಂಚಾಯತ್ ಸದಸ್ಯ ಅಪ್ಪಾಜಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಆರೋಗ್ಯ ನಿರೀಕ್ಷಣಾಧಿಕಾರಿ ಪಣಿಂದ್ರ , ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಮತಾ ಆಶಾ ಕಾರ್ಯಕರ್ತೆಯರಾದ ಸುಧಾಮಣಿ, ಗೌರಮ್ಮ ಹಾಗೂ ಕಲಾ ತಂಡದವರಾದ ಮಂಜುಳಾ, ಕುಡಲಕುಪ್ಪೆ ಸೋಮಶೇಖರ್, ವನಿತ, ಧನಂಜಯ, ದೇವರಾಜ್, ಪುಟ್ಟ ಮಂಜಮ್ಮ, ಪ್ರತಾಪ್ ಹಾಗೂ ಆರ್ಕೇಶ್ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!