Monday, November 23, 2026

ಪ್ರಾಯೋಗಿಕ ಆವೃತ್ತಿ

ಗ್ರಾಮೀಣ ಜನರಿಗೆ ಕಬಡ್ಡಿ ಬಹಳ ಇಷ್ಟದ ಕ್ರೀಡೆ : ಶಾಸಕ ಎಂ. ಶ್ರೀನಿವಾಸ್

ಮಂಡ್ಯ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಯುವಕರ ಸಂಘದ ವತಿಯಿಂದ ಕಬಡ್ಡಿ ಪಂದ್ಯಾವಳಿಯ ಕಾರ್ಯಕ್ರಮವನ್ನು ಶಾಸಕ ಎಂ. ಶ್ರೀನಿವಾಸ್ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಕಬಡ್ಡಿ ಬಹಳ ಇಷ್ಟ ಪಡುವ ಆಟದ ಕ್ರೀಡೆಯಾಗಿದೆ. ಚಿಕ್ಕಮಂಡ್ಯ ಮತ್ತು ಗೋಪಾಲಪುರ ಗ್ರಾಮಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಿರುವುದು ಸಂತಸ ತಂದಿದೆ. ಗ್ರಾಮೀಣ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲಾ ಖಾನ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಕಬ್ಬಡ್ಡಿ ಆಟವನ್ನು ಆಯೋಜಿಸಬೇಕು. ಭಾರತದ ವಿಶೇಷ ಕ್ರೀಡೆಯಲ್ಲಿ ಕಬಡ್ಡಿಯೂ ಒಂದಾಗಿದೆ, ಯುವಕರು ಮದ್ಯಪಾನ ಧೂಮಪಾನದಿಂದ ದೂರವಿರಬೇಕೆಂದರು.

ಯುವಕರು ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಹಲವು ರೋಗಗಳಿಂದ ದೂರವಿರಬಹುದು. ಸೋಲು ಗೆಲುವಿನ ಬಗ್ಗೆ ತಲೆಕೆಡಿಸಿಕೊಳ್ಳದೆ, ಕ್ರೀಡೆಗಳಲ್ಲಿ ಭಾಗವಹಿಸಿ ಗೆದ್ದು ಹಿಗ್ಗದೆ, ಸೋತಾಗ ಕುಗ್ಗದೆ, ಆಟವನ್ನು ಸಮಾನವಾಗಿ ಸ್ವೀಕರಿಸಬೇಕೆಂದರು.

ಇದೇ ಸಂರ್ಭದಲ್ಲಿ ಗಣ್ಯರು ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡು ಹುರಿದುಂಬಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ಕ್ರೀಡಾ ಪ್ರೇಮಿಗಳು ಭಾಗವಹಿಸಿದ್ದರು. ಸರ್.ಎಂ.ವಿಶ್ವೇಶ್ವರಯ್ಯ ಯುವಕರ ಸಂಘದಿಂದ ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲ್ಲಾ ಖಾನ್ ಮತ್ತು ಶಾಸಕ ಎಂ.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಸಿದ್ದೇಗೌಡ, ಉಪಾಧ್ಯಕ್ಷ ಜ್ಯೋತಿ, ಶಶಿಕುಮಾರ್ ಸದಸ್ಯರಾದ ರಘು, ಸವಿತಾ ನಾಗಮ್ಮ ಪುಟ್ಟಮ್ಮ, ಪಿಡಿಒ ಕೋಮಲ, ಮಲ್ಲೇಶ್, ಪ್ರಜಾ ವಾರ್ತೆ ಪತ್ರಿಕೆಯ ಸಂಪಾದಕ ಕೆ.ಎನ್.ನವೀನ್ ಕುಮಾರ್ ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ