Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕಬಡ್ಡಿ ಕ್ರೀಡೆ ಮಂಡ್ಯ ಜಿಲ್ಲೆಯ ಹಿರಿಮೆಯಾಗಿದೆ: ಮೀರಾಶಿವಲಿಂಗಯ್ಯ

ಕಬಡ್ಡಿ ಎನ್ನುವುದು ಮಂಡ್ಯ ಜಿಲ್ಲೆಯ ಹಿರಿಮೆಯ ಕ್ರೀಡೆಯಾಗಿದೆ ಎಂದು ಎಸ್.ಬಿ.ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾಶಿವಲಿಂಗಯ್ಯ ಹೇಳಿದರು.

ಮಂಡ್ಯ ನಗರದ ಎಂ.ಸಿ.ರಸ್ತೆಯ ಜ್ಞಾನಸಾಗರ ಕ್ಯಾಂಪಸ್ ಆವರಣದಲ್ಲಿ ತಾವರೆಗೆರೆ ಕೈಗಾರಿಕಾ ತರಬೇತಿ ಸಂಸ್ಥೆಯ 25ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಏರ್ಪಡಿಸಿದ್ದ ಮಂಡ್ಯ ಜಿಲ್ಲಾ ಮಟ್ಟದ ಐಟಿಐ ಕಬಡ್ಡಿ ಪಂದ್ಯಾವಳಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐಟಿಐ ತರಬೇತಿದಾರರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ದೇಶದಲ್ಲಿ ಮಂಡ್ಯದವರು ಕಬಡ್ಡಿಯಲ್ಲಿ ಮುಂದೆ ಎನ್ನುವ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗ ಅಧಿಕಾರಿ ಸಿ.ಆರ್.ನಾಗರಾಜು ಮಾತನಾಡಿ ಮಕ್ಕಳಿಗೆ ಪಾಠ ಪ್ರವಚನಗಳ ಜೊತೆಗೆ ಕ್ರೀಡೆ,ಕಲೆ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗುವ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು.

ಐಟಿಐ ಕಾಲೇಜು ಮಕ್ಕಳಿಗೆ ಕ್ರೀಡಾ ಚಟುವಟಿಕೆ ಆಯೋಜಿಸುವುದು ವಿರಳ ಇಂತಹ ಸಂದರ್ಭದಲ್ಲಿ
ಎಸ್.ಬಿ.ಎಜುಕೇಶನ್ ಟ್ರಸ್ಟ್ ವತಿಯಿಂದ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಎಂದು ತಿಳಿದು ಭಾಗವಹಿಸುವುದು ಮುಖ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಂಡವ್ಯ ಎಕ್ಸಲೆನ್ಸ್ ಪಿಯು ಕಾಲೇಜು ಶೈಕ್ಷಣಿಕ ಪಾಲುದಾರ ಹೆಚ್.ಎಂ.ಶ್ರೀನಿವಾಸ್,
ಐಟಿಐ ಕಾಲೇಜು ಪ್ರಾಂಶುಪಾಲ ಪ್ರವೀಣ್ ಕುಮಾರ್, ಪ್ರಸನ್ನ, ಸುರೇಶ್, ಪರಮೇಶ್, ಎಸ್.ಬಿ.ಎಜುಕೇಶನ್ ಟ್ರಸ್ಟ್ ಆಡಳಿತ ಅಧಿಕಾರಿ ತನ್ಮಯ್, ಕರ್ನಾಟಕ ತಂಡದ ಜೂನಿಯರ್ ಕಬಡ್ಡಿ ಚಾಂಪಿಯನ್ ಷಿಪ್ ನಾಯಕಿ ಹಂಶಿತ ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ