ಕೆ.ಆರ್.ಪೇಟೆ ತಾಲ್ಲೂಕಿನ ಶೆಟ್ಟನಾಯಕನಕೊಪ್ಪಲು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳು ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಮಂಡ್ಯ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ವಿದ್ಯಾರ್ಥಿನಿಯರಿಗೆ ಟ್ರೋಫಿ ಹಾಗೂ ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಕೋರಿದರು.
ಈ ಪಂದ್ಯದಲ್ಲಿ ಗೆದ್ದು ಸಾಧನೆ ಮಾಡಲು ಕಾರಣರಾದ ಕೋಚ್ ಅಶ್ವಿನಿ, ಶಿಕ್ಷಕ ಮಂಜು ಅವರನ್ನು ಶಾಲೆಯ ಪ್ರಾಂಶುಪಾಲೆ ಪವಿತ್ರ, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.




