Saturday, November 21, 2026

ಪ್ರಾಯೋಗಿಕ ಆವೃತ್ತಿ

ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದ ಟೀಸರ್ ಬಿಡುಗಡೆ

ಸತತ ಎರಡು ವರ್ಷಗಳ ಕಾಲ ಚಿತ್ರೀಕರಣ ಮಾಡಿರುವ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾದ ಎರಡು ನಿಮಿಷದ ಟೀಸರ್ ಇದೀಗ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 5 ಗಂಟೆಗೆ ರಿಲೀಸ್ ಆಗಿದೆ.

ಸೆಪ್ಟೆಂಬರ್ 18ಕ್ಕೆ ಉಪೇಂದ್ರರವರ ಜನ್ಮದಿನ ಇರುವ ಭಾಗವಾಗಿ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿಲಾಗಿದ್ದು ಸಧ್ಯದಲ್ಲಿ ಬಿಡುಗಡೆಯ ದಿನಾಂಕವನ್ನು ತಿಳಿಸುತ್ತೆವೆ ಎಂದು ಕಬ್ಜ ಸಿನಿಮಾದ ನಿರ್ದೇಶಕ ಆರ್.ಚಂದ್ರು ತಿಳಿಸಿದ್ದಾರ.

ಪ್ಯಾನ್ ಇಂಡಿಯಾ ಸಿನಿಮಾವಾದ ಕಬ್ಜ ಸಿನಿಮಾದಲ್ಲಿ ಕಿಚ್ಚ ಸುದೀಪ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು,ಬಹುಭಾಷಾ ನಟಿ ಶ್ರೀಯಾ ಸರಣ್ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ.

ಸಿನಿಮಾಗೆ ಆರ್.ಚಂದ್ರು ನಿರ್ದೇಶನದಲ್ಲಿ ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಬ್ಜ ಚಿತ್ರದಲ್ಲಿ ಖ್ಯಾತ ನಟರ ದಂಡೇ ಇದೆ.

ಬಾಲಿವುಡ್ ನಟ ನವಾಬ್ ಶಾ, ಕೆ.ಜಿ.ಎಫ್ ಸಿನಿಮಾದಲ್ಲಿ ನಟಿಸಿದ್ದ ಲಕ್ಷ್ಮೀಶ ಲಕ್ಷಣ್, ತಮಿಳಿನ ಐ ಸಿನಿಮಾ ಖ್ಯಾತಿಯ ಕಾಮರಾಜ್, ಜಗಪತಿ ಬಾಬು, ಸುನೀಲ್ ಪುರಾಣಿಕ್, ಪ್ರಮೋದ್ ಶೆಟ್ಟಿ ಈಗೆ ಇನ್ನು ಹಲವು ಕಲಾವಿದರಿರುವ ಕಬ್ಜ ಚಿತ್ರಕ್ಕೆ ಎ.ಜೆ.ಶೆಟ್ಟಿ ಛಾಯಾಗ್ರಹಣವಿದ್ದು ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ