Monday, November 23, 2026

ಪ್ರಾಯೋಗಿಕ ಆವೃತ್ತಿ

ಕಾಳಿಕಾಂಭ ದೇವಾಲಯದಲ್ಲಿ ಅಶ್ವಕ್ಕೆ ಪೂಜೆ

ಮಂಡ್ಯನಗರದ ಕಾಳಿಕಾಂಭ ದೇವಾಲಯದಲ್ಲಿ ಬಿಜೆಪಿ ವತಿಯಿಂದ ಅಶ್ವಕ್ಕೆ ಪೂಜೆ ಸಲ್ಲಿಸಲಾಯಿತು.

ದ್ವಾಪರಯುಗದಲ್ಲಿ ಕೃಷ್ಣನು ಅರ್ಜುನನಿಗೆ ಅಶ್ವಮೇಧದ ಕುದುರೆಯ ಸಾರಥ್ಯವನ್ನು ವಹಿಸುವಂತೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿಯು ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಷಾ ಅವರಿಗೆ ಪಕ್ಷದ ನಾಯಕರು ಸಾರಥ್ಯವನ್ನು ವಹಿಸಬೇಕೆನ್ನುವ ಉದ್ಧೇಶದಿಂದ ಈ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶಿವಕುಮಾರಾಧ್ಯ ತಿಳಿಸಿದರು.

ರಾಜ್ಯದಲ್ಲಿ ಕಾರ್ಯಕರ್ತರ ಇಚ್ಚೆಯಂತೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ