ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದ ವಿವಿಧ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ನಾಗೇಂದ್ರ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗೇಂದ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಚುನಾವಣಾಧಿಕಾರಿ ಜಿ. ರಾಮಕೃಷ್ಣ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಕೃಷ್ಣಮೂರ್ತಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಗ್ರಾಮೀಣ ರೈತರನ್ನು ಅರ್ಥಿಕವಾಗಿ ಬಲಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳು ಹಾಗೂ ಆದಾಯದ ಮೂಲವನ್ನು ವೃದ್ದಿಗೊಳಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ, ಶಾಸಕ ಪಿ.ಎಂ ನರೇಂದ್ರಸ್ವಾಮಿ ಹಾಗೂ ನಿರ್ದೇಶಕರು, ಷೇರುದಾರರ ಸಹಕಾರದೊಂದಿಗೆ ಸಂಘದ ಸದಸ್ಯರಿಗೆ ಸಾಲ ನೀಡುವುದಕ್ಕೆ ಮಾತ್ರ ಸೀಮಿತಗೊಳಿಸದೇ ಸಂಘವನ್ನು ಸರ್ವೊತ್ತೋಮುಖವಾಗಿ ಅಭಿವೃದ್ದಿಗೊಳಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು ಮಾತನಾಡಿ, ಸಹಕಾರ ಸಂಘವನ್ನು ಉತ್ತಮವಾಗಿ ಮುನ್ನೆಡಿಸಿಕೊಂಡು ಹೋಗುತ್ತಾರೆಂಬ ನಂಬಿಕೆಯಿAದ ಚುನಾವಣೆಯಲ್ಲಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಆಯ್ಕೆಗೊಳಿಸಿದ ಷೇರುದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಗೊಂದಲವಿಲ್ಲದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಷೇರುದಾರರ ನಂಬಿಕೆಗೆ ಚ್ಯೂತಿ ಭಾರದ ರೀತಿಯಲ್ಲಿ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ ಅವರ ಸಲಹೆ ಸಹಕಾರದೊಂದಿಗೆ ಸಂಘವನ್ನು ಅಭಿವೃದ್ದಿಗೊಳಿಸಲು ಎಲ್ಲಾ ನಿರ್ದೇಶಕರು ಒಗ್ಗಟ್ಟಿನಿಂದ ದುಡಿಯುವುದಾಗಿ ಹೇಳಿದರು.
ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ನಿರ್ದೇಶಕರಾದ ಮಹೇಶ್, ಸುರೇಶ್, ಶಿವಪ್ಪ, ಚಂದ್ರಪ್ಪ, ರಸೂಲ್ಜಾನ್,ನಂಜುಂಡೇಗೌಡ, ಸಂದ್ಯಾ, ಮಧು, ಸುಜಾತ, ರಾಜಣ್ಣ, ಗ್ರಾ.ಪಂ ಸದಸ್ಯ ವೆಂಕಟೇಶ್, ಮಾಜಿ ಅಧ್ಯಕ್ಷ ಜಯಲಕ್ಷ್ಮಮ್ಮ, ಸೊಸೈಟಿ ಮಾಜಿ ಅಧ್ಯಕ್ಷ ಚಿಕ್ಕಹೊನ್ನೇಗೌಡ, ಮಾಜಿ ಉಪಾಧ್ಯಕ್ಷ ಕೃಷ್ಣ ಮುಖಂಡರಾದ ರಂಗಸ್ವಾಮಿ, ಬಸವಣ್ಣ, ಕೆಂಪಲಿಂಗಯ್ಯ, ಶಂಕರ್, ಪ್ರಕಾಶ್, ಅಮೀರ್ ಜಾನ್, ಮಾದ ನಾಯಕ್, ಯಜಮಾನ್ ರಂಗಸ್ವಾಮಿ, ಮಲ್ಲೇಶ್, ನಾಯಕ್, ಕಟ್ಟೇಬೋರೇಗೌಡ, ಮಲ್ಲು, ಚನ್ನಪ್ಪ ಸೇರಿದಂತೆ ಇತರರು ಇದ್ದರು.




